ಎನ್‌ಎಸ್‌ಎಸ್ ಘಟಕದಿಂದ ಉಚಿತ ನೇತ್ರ ತಪಾಸಣಾ ಶಿಬಿರ
ರಾಯಚೂರು:ಆ೨೮: ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ರಾಯಚೂರು ತಾಲೂಕಿನ ಬಾಯಿದೊಡ್ಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಡವಾಟಿ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಯಚೂರು ಇವರ ಸಹಯೋಗದಲ್ಲಿ ಸಾರ್ವಜನಿಕರಿಗಾಗಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಿದೆ. ವಡವಾಟಿ ಗ್ರಾಮಸ್ಥರು, ಬಾಯ್ದೊಡ್ಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಸದರಿ ಉಚಿತ ನೇತ್ರ ತಪಾಸಣಾ ಶಿಬಿರದ ಪ್ರಯೋಜನವನ್ನು ಪಡೆಯುವಂತೆ ಶಿಬಿರದ ಸಂಘಟಕ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ಸಂತೋಷಕುಮಾರ ರೇವೂರ ಗ್ರಾಮಸ್ಥರಲ್ಲಿ ಹಾಗೂ ಸಾರ್ವಜನಿಕರಲ್ಲಿ ಕೋರಿರುವರು.