ಕೆಳಪರ್ಕಳದಲ್ಲಿ ಎರಡು ಕಾರುಗಳ ನಡುವೆ ಅಪಘಾತ
ಮಣಿಪಾಲ: ಕೆಳಪರ್ಕಳದ ಬಳಿ ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ನಗರಸಭೆಯ ನೀರಿನ ರೇಚಕದ ಬಳಿ ಇರುವ ಟ್ರಾನ್ಸ್ ಫಾರ್ಮರ್ ಗೆ ತಾಗಿ ನಿಂತ ಘಟನೆ ಮಂಗಳವಾರ ಮಧ್ಯಾಹ್ನ ವರದಿಯಾಗಿದೆ.
ಒಂದು ಕಾರು ರೇಜಕದ ಪಕ್ಕದ ರಸ್ತೆಯಿಂದ ಬರುತ್ತಿದ್ದರೆ ಮತ್ತೊಂದು ಕಾರು ಮುಖ್ಯ ರಸ್ತೆಯಲ್ಲಿ ಬರುತ್ತಿತ್ತು ಎನ್ನಲಾಗಿದೆ. ಘಟನೆಯಿಂದಾಗಿ ಎರಡೂ ಕಾರುಗಳು ಜಖಂಗೊಂಡಿದ್ದು ಯಾರಿಗೂ ಗಾಯಗಳಾಗಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.