ಕ್ರೀಡಾಕೂಟಕ್ಕೆ ಶಾಸಕರಿಂದ ಚಾಲನೆ
ಸಂಜೆವಾಣಿ ವಾರ್ತೆ
ನಂಜನಗೂಡು: ಆ.28:- ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ನೀಡುವ ಆದ್ಯತೆಯನ್ನು ಕ್ರೀಡೆಗಳಿಗೂ ನೀಡಬೇಕು ಎಂದು ಶಾಸಕ ದರ್ಶನ್‍ಧ್ರುವನಾರಾಯಣ್ ಹೇಳಿದರು.
ಅವರು ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕೆಂಪಿಸಿದ್ದನಹುಂಡಿಯ ಕನಕದಾಸ ಸಾರ್ವಜನಿಕ ಪ್ರೌಢಶಾಲೆಯ ಸಹಯೋಗದಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಪೂರ್ವ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಮನಸ್ಸು ಮತ್ತು ದೇಹ ಎರಡ ಮೇಲೂ ಸಹ ಧನಾತ್ಮಕ ಪರಿಣಾಮ ಬೀರುತ್ತವೆ, ವ್ಯಕ್ತಿಯಲ್ಲಿ ಆತ್ಮವಿಶ್ವಾಸವನ್ನು ತುಂಬಿ, ಗುರಿಮುಟ್ಟುವ ಸಾಮಥ್ರ್ಯ ವೃದ್ದಿವುದಲ್ಲದೆ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ನೀಡುವ ಆದ್ಯತೆಯನ್ನು ಕ್ರೀಡೆಗಳಿಗೂ ನೀಡಬೇಕು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ತಾಳ್ಮೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.
ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಣೆ ಮಾಡಿದರು.
ಇದೇ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ಕೆಂಪಿಸಿದ್ದನಹುಂಡಿ ಗ್ರಾಪಂ ಅಧ್ಯಕ್ಷ ರವಿ, ಹುಚ್ಚಯ್ಯ, ಕೆ.ಎನ್.ನಂಜಯ್ಯ, ಸಂತೋಷ್, ರವಿ, ಶೃತಿ ಬೀರಯ್ಯ, ಗ್ರಾಪಂ ಮಾಜಿ ಅಧ್ಯಕ್ಷ ನಂಜಯ್ಯ, ಕಳಲೆ ರಾಜೇಶ್, ಬಿಇಓ ಮಹೇಶ್ ಸೇರಿದಂತೆ ವಿವಿಧ ಶಾಲೆಯ ವಿವಿಧ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇದ್ದರು.