ಸಿಎಂ ಬೆಂಬಲಿಸಿ ಅಹಿಂದ ಪ್ರತಿಭಟನೆ
ಕೋಲಾರ,ಆ.೨೮- ಸಿಎಂ ಸಿದ್ದರಾಮಯ್ಯಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಬೆಂಗಳೂರಿನಲ್ಲಿ ಕರೆ ನೀಡಲಾಗಿದ್ದ ಪ್ರತಿಭಟನೆ ಹಿನ್ನಲೆ ಹಿಂದುಳಿದ ವರ್ಗಗಳ ಒಕ್ಕೂಟದ ಶ್ರೀನಿವಾಸಪುರದ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಭಾಗಿಯಾಗಿ ಸಿದ್ದರಾಮಯ್ಯಪರ ಪ್ರತಿಭಟನೆ ನಡೆಸಿದರು.
ಮೂಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಸೂಚನೆ ನೀಡಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯ ಪರ ನಾವಿದ್ದೇವೆಂಬ ಸಂದೇಶ ಸಾರಲು ಬೃಹತ್ ಪ್ರತಿಭಟನೆಯನ್ನು ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಲಾಗಿತ್ತು.
ಕೋಲಾರ ಜಿಲ್ಲೆಯಿಂದಲ್ಲೂ ಸಾಕಷ್ಟು ಮಂದಿ ಭಾಗಿಯಾಗಿದ್ದರು, ಶ್ರೀನಿವಾಸಪುರದ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಬಸ್ ವ್ಯವಸ್ಥೆ ಮಾಡುವ ಮೂಲಕ ನೂರಾರು ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಈ ವೇಳೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ವೇಮಣ್ಣ, ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ್, ಕಾರ್ಯದರ್ಶಿ ಕೆ.ವಿ.ಮಂಜುನಾಥ್, ಎಸ್.ಎಂ.ನಾರಾಯಣಸ್ವಾಮಿ, ಸೋಮಶೇಖರ್, ರಾಮಕೃಷ್ಣ, ಅನ್ನಪೂರ್ಣೇಶ್ವರಿ ಬಾಬು ಹಾಗೂ ಇತರರು ಭಾಗವಹಿಸಿದ್ದರು.