ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ
ಕಲಬುರಗಿ:ಆ.27:ಕಲಬುರಗಿ ತಾಲೂಕಿನ ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಸತಿ ಶಾಲೆಯ ವಿದ್ಯಾರ್ಥಿಗಳು 2024-25ನೇ ಶೈಕ್ಷಣಿಕ ಸಾಲಿನಲ್ಲಿ ವಲಯ ಮಟ್ಟದ ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಮತ್ತು ಬಾಲಕಿಯರ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಸುರೇಶ ಆಲ್ದಾರ್ತಿ ತಿಳಿಸಿದ್ದಾರೆ.