ಆನ್‍ಲೈನ್ ವಂಚನೆ ಕಂಡು ಬಂದರೆ ತಕ್ಷಣ ದೂರು ನೀಡಿ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಆ. 27: ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್‍ಬುಕ್‍ನ ನಕಲಿ ಖಾತೆಗಳನ್ನು ಸೃಷ್ಟಿ ಮಾಡಿ ಡಿಪಿಗೆ ಜಿಲ್ಲಾಧಿಕಾರಿ ಹೆಸರು ಮತ್ತು ಫೆÇೀಟೋವನ್ನು ಬಳಕೆ ಮಾಡಿ ಸಾರ್ವಜನಿಕರಿಗೆ, ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಮೆಸೇಜ್ ಮಾಡಿ ಹಣದ ಬೇಡಿಕೆಯಿಟ್ಟು ವಂಚನೆ ಮಾಡುವುದು ಕಂಡು ಬಂದರೆ ತಕ್ಷಣ ದೂರು ನೀಡಿ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ತಿಳಿಸಿದ್ದಾರೆ.
ಆನ್‍ಲೈನ್ ವಂಚಕರ ಫೆÇೀನ್ ಮತ್ತು ಮೆಸೆಜ್‍ಗಳು ಬಂದಾಗ ಎಚ್ಚರಿಕೆಯಿಂದ ಮೊಬೈಲ್ ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.