ವಿಶ್ವ ಮಾನವ ಸಂದೇಶ ಮಕ್ಕಳಲ್ಲಿ ಬಿತ್ತಿ: ಸಂಗಮೇಶ ಬಬಲೇಶ್ವರ ಕರೆ
ವಿಜಯಪುರ,ಆ.27: ಶ್ರೀ ಕೃಷ್ಣನ ಆದರ್ಶಗಳನ್ನು ಮಕ್ಕಳಿಗೆ ತಿಳಿಸುವುದರ ಮೂಲಕ ಅವರನ್ನು ಆದರ್ಶ ವ್ಯಕ್ತಿಯಾಗಿ ರೂಪಿಸಿ ವಿಶ್ವ ಮಾನವ ಸಂದೇಶ ಎಲ್ಲೆಡೆ ಪಸರಿಸಬೇಕು ಎಂದು ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷÀ ಸಂಗಮೇಶ ಬಬಲೇಶ್ವರ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವುಗಳ ಸಹಯೋಗದಿಂದ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸೋಮವಾರ ಜರಗಿದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ವ ಸಮುದಾಯಗಳ ಪ್ರೀತಿಗೆ ಪಾತ್ರರಾದ ಶ್ರೀ ಕೃಷ್ಣರ, ಕೌಶಲ್ಯ, ಎಲ್ಲರೊಂದಿಗೆ ಬೆರೆಯುವ ವ್ಯಕ್ತಿತ್ವ, ಆದರ್ಶ, ಸ್ನೇಹ, ಅಪಾಯಮಾನ್ಯವಾಗಿದೆ. ರಾಜತಾಂತ್ರಿಕ ನಿಪುಣತೆ, ಸಹನೆ, ತಾಳ್ಮೆಯಂತಹ ಗುಣಗಳಿಂದ ವಿಶಿಷ್ಟವಾಗಿ ಹೊರಹೊಮ್ಮಿದ ಶ್ರೀ ಕೃಷ್ಣ ಎಲ್ಲರಲ್ಲೂ ಬೆರೆಯುವ ವ್ಯಕ್ತಿತ್ವ ಅವರದ್ದು, ಕುಚೇಲ ಶ್ರೀಕೃಷ್ಣನ ಸ್ನೇಹ, ಯಾವ ಬೇಧ ಭಾವಗಳಿಲ್ಲದ ಅಪರೂಪದ ವ್ಯಕ್ತಿತ್ವ, ಶ್ರೀ ಕೃಷ್ಣನ ಆದರ್ಶಗಳು ನಮ್ಮ ಮನೆ ಮನ ಬೆಳಗುವಂತಾಗಲಿ, ಮಕ್ಕಳಿಗೆ ಶ್ರೀಕೃಷ್ಣನ ಆದರ್ಶಗಳನ್ನು ತಾಯಂದಿರು ತಿಳಿಸಿಕೊಡಬೇಕು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಮಾತನಾಡಿ, ಶ್ರೀ ಕೃಷ್ಣನ ಜೀವನ ಚರಿತ್ರೆ ವರ್ಣರಂಜಿತವಾಗಿದ್ದು, ಎಲ್ಲಾ ವರ್ಗದ ಜನರ ಮೇಲೆ ಪ್ರಭಾವ ಬೀರಿದೆ. ಭಾರತೀಯರಲ್ಲಿ ಶ್ರೀಕೃಷ್ಣನಿಗೆ ಶ್ರೇಷ್ಠ ಸ್ಥಾನವಿದೆ. ಕೃಷ್ಣ ಸರ್ವ ಸಮರ್ಥನಾಗಿದ್ದರು, ಸರ್ವರ ಸಹಭಾಗಿತ್ವ ಉಪಯೋಗಿಸಿಕೊಂಡು ಕಾರ್ಯ ನಿರ್ವಹಿಸುತ್ತಿದ್ದ ಪರಿ ಹಾಗೂ ಆತನ ಜೀವನದ ಪ್ರತಿಯೊಂದು ಘಟನೆಯೂ ಅನುಸರಣಿಯವಾಗಿದೆ. ಪ್ರಸ್ತುತ ವರ್ತಮಾನದಲ್ಲಿ ಶ್ರೀ ಕೃಷ್ಣರ ಸಂದೇಶಗಳನ್ನು ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.
ಉಪನ್ಯಾಸ ನೀಡಿದ ಪಂಡಿತ ಆಚಾರ್ಯ ವಿನಾಯಕ ಗುಡಿ ಅವರು, ಶ್ರೀಕೃಷ್ಣನ ವಿಶೇಷ ಗುಣಗಳು ಗಮನ ಸೆಳೆಯುತ್ತವೆ. ಇಂದಿಗೂ ಸಹ ಶ್ರೀಕೃಷ್ಣನ ವ್ಯಕ್ತಿತ್ವ ಮಾದರಿಯಾಗಿದೆ ಎಂದು ಹೇಳುವ ಮೂಲಕ ಶ್ರೀ ಕೃಷ್ಣ ನ ಬಾಲ ಲೀಲೆಗಳು, ಜೀವನ ಚರಿತ್ರೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ ಮಾಡಲಾಯಿತು. ವೀಣಾ ಥಿಟೆ ಸಂಗಡಿಗರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.
ವೇದಿಕೆಯ ಮೇಲೆ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ದುರ್ಗಪ್ಪ ಉಳ್ಳಾಗಡ್ಡಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಶ್ರೀ ಕೃಷ್ಣ ಭಾವಚಿತ್ರ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು. ಮೆರವಣಿಗೆಯು ವಿವಿಧ ಕಲಾ ವಾದ್ಯಮೇಳದೊಂದಿಗೆ ಮಾರ್ಕೆಟ್ ರಸ್ತೆಯ ಮೂಲಕ, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಕನಕದಾಸ ವೃತ್ತದ ಮೂಲಕ ರಂಗಮಂದಿರ ತಲುಪಿತು.
ಕಾರ್ಯಕ್ರಮದಲ್ಲಿ ಗುರು ಕಣ್ಣೂರ, ರಾಮು ಮನಗೂಳಿ, ಮಹಾದೇವ ದಲಾಲಿ, ಯಂಕಪ್ಪ ಜಾಲವಾದಿ ಯಲ್ಲಪ್ಪ ದ್ಯಾಬೇರಿ, ಮಹಾದೇವಿ ಬಾಗಲಕೋಟ, ಯಂಕಪ್ಪ ಜೋರಪುರ, ಸುರೇಶ ಗೊಲ್ಲರ, ಹನಮಂತ ತೊರವಿ, ಯಲ್ಲಪ್ಪ ರಬಕವಿ, ಭೀಮವ್ವ ಬಾಗಲಕೋಟೆ, ದುರ್ಗಾವ್ವ ಚಿಕ್ಕರೂಗಿ, ಸಾಮವ್ವ ಗೊಲ್ಲರ, ಯಲ್ಲವ್ವ ನಾಗಠಾಣ, ರಮೇಶ ಗೊಲ್ಲರ, ಮಹಾಂತೇಶ ಗೊಲ್ಲರ, ದೇವೇಂದ್ರ ಮೀರೆಕರ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ, ಅಡಿವೆಪ್ಪ ಸಾಲಗಲ್, ವಿದ್ಯಾವಂತಿ ಅಂಕಲಗಿ ಉಪಸ್ಥಿತರಿದ್ದರು.