ಸಂಗನ ಬಸವ ಶಿಶುನಿಕೇತನ ಶಾಲೆಯಲ್ಲಿ ಗಾಂಧಿ, ಶಾಸ್ತ್ರಿಯವರ ಜಯಂತಿ
ವಿಜಯಪುರ, ಅ.2:ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಡಿಯಲ್ಲಿ ನಡೆಯುವ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಮಹಾತ್ಮ ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜಯಂತ್ಯೋತ್ಸವ ಆಚರಿಸಲಾಯಿತು
ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ ಹಾಗೂ ಶಾಲೆಯ ನಾಮಿನಿ ಚೇರ್ಮನ್ ಸಂಗನಗೌಡ ನಾಡಗೌಡ ಅವರು ಮತ್ತು ಶಾಲೆಯ ಆಡಳಿತಾದಿಕಾರಿಗಳು ಮತ್ತು ಸಿಎಒ ಎಚ್. ವೆಂಕಟೇಶ ಮಹಾತ್ಮ ಗಾಂದಿಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಾಲೆಯ ಪ್ರಾಂಶುಪಾಲರಾದ ವಿಜಯಲಕ್ಷ್ಮೀ ಪಟ್ಟೇದ ಅವರು ಮಹಾತ್ಮಾ ಗಾಂಧಿಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಯವರನ್ನು ಕುರಿತು ವಿಶೇಷವಾಗಿ ಮಾತನಾಡಿದರು. ಉಪ ಪ್ರಾಂಶುಪಾಲರಾದ ಶ್ರೀದೇವಿ ಕನ್ನಾಳ ಅವರು ರಘುಪತಿ ರಾಘವ ರಾಜಾರಾಮ ಹಾಡು ಮತ್ತು ಓಂ ನಾರಾಯಣ ನಾರಾಯಣ ಗೀತೆಯನ್ನು ಹಾಡಿದರು. ಶಿಕ್ಷಕಿಯರು ಗಾಂಧೀಜಿ ಮತ್ತು ಶಾಸ್ತ್ರೀಯ ಅವರನ್ನು ಕುರಿತು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು , ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು