ಮದರ್ ತೆರೆಸಾ ಶಾಲೆಯಲ್ಲಿ ಸಡಗರ ಸಂಭ್ರಮದಿAದಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
ಕಲಬುರಗಿ:ಆ.೨೭:ಗೋದುತಾಯಿ ಬಡಾವಣೆಯಲ್ಲಿರುವ ಮದರ್ ತೆರೆಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಮಂಗಳವಾರದAದು ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನರ್ಸರಿ, ಎಲ್.ಕೆ.ಜಿ, ಹಾಗೂ ಯು.ಕೆ.ಜಿ ಮಕ್ಕಳಿಗಾಗಿ ವಿವಿಧ ವೇಷ ಭೂಷಣ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಮಕ್ಕಳು ಬಹಳ ಉತ್ಸುಕತೆಯಿಂದ ಕೃಷ್ಣ ರಾಧೆ ಉಡುಪು ಧರಿಸಿ ಸಂತಸಪಟ್ಟರು. ಪ್ರಾಂಶುಪಾಲರಾದ ನಾಗೇಂದ್ರ ಬಡಿಗೇರ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಶಿವಪುತ್ರಪ್ಪಾ ಡೆಂಕಿಯವರು ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರಿಗೂ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ತಿಳಿಸಿದರು.