ಕರಂಬಳ್ಳಿ ದೇವಳದ ಕೆರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು
ಮಣಿಪಾಲ, ಆ.೨೬: ಕರಂಬಳ್ಳಿ ದೇವಳದ ಕೆರೆಗೆ ಬಿದ್ದು ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ರವಿವಾರ ಸಂಜೆ ವೇಳೆ ನಡೆದಿದೆ.
ಮೃತರನ್ನು ಇಂದ್ರಾಳಿ ನಿವಾಸಿ ಸಿದ್ಧಾರ್ಥ್ ಶೆಟ್ಟಿ(೧೯) ಎಂದು ಗುರುತಿಸಲಾಗಿದೆ. ಮಣಿಪಾಲ ಎಂಐಟಿ ವಿದ್ಯಾರ್ಥಿಯಾಗಿರುವ ಇವರು ತನ್ನ ಗೆಳೆಯ ರೊಂದಿಗೆ ದೇವಳದ ಕೆರೆಯಲ್ಲಿ ಈಜಲು ತೆರಳಿದ್ದರು.
ಅಲ್ಲಿ ನೀರಿನಲ್ಲಿ ಮುಳುಗಿ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಕೂಡಲೇ ಮೇಲಕ್ಕೆ ಎತ್ತಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಅವರು ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಮಣಿಪಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ