ನಗರದ ವಿವಿಧೆಡೆ ಕೃಷ್ಣ ಜನ್ಮಾಷ್ಟಮಿ ಆಚರಣೆ
ಸಂಜೆವಾಣಿ ನ್ಯೂಸ್
ಮೈಸೂರು: ಆ.27:- ದುಷ್ಟ ಶಿಕ್ಷಕ, ಶಿಷ್ಟ ರಕ್ಷಕ ಶ್ರೀಕೃಷ್ಣನ ಜನ್ಮಾಷ್ಟಮಿಯನ್ನು ಸೋಮವಾರ ನಗರದ ವಿವಿಧೆಡೆ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಜನ್ಮಾಷ್ಟಮಿ ಅಂಗವಾಗಿ ನಗರದ ವಿವಿಧ ದೇವಸ್ಥಾನಗಳಲ್ಲಿ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬೋಗಾದಿಯ ಹರೆ ಕೃಷ್ಣ ದೇವಾಲಯ, ಅರಮನೆ ಆವರಣದಲ್ಲಿರುವ ಗೋಪಾಲಸ್ವಾಮಿ ದೇವಾಲಯ, ಶಿವರಾಂಪೇಟೆಯಲ್ಲಿರುವ ಸಂತ ಕೃಷ್ಣ ದೇವಾಲಯ ಸೇರಿದಂತೆ ನಗರದ ವಿವಿಧೆಡೆಗಳಲ್ಲಿರುವ ಕೃಷ್ಣ ದೇವಾಲಯಗಳಲ್ಲಿ ಕೃಷ್ಣನನ್ನು ವಿಶೇಷವಾಗಿ ಅಲಂಕರಿಸಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು.
ಠಾಣೆಯಲ್ಲಿ ಕೃಷ್ಣ ಜನ್ಮಾಷ್ಟಮಿ:
ಕೃಷ್ಣರಾಜ ಪೆÇಲೀಸ್ ಠಾಣೆಯ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಶ್ರೀಕೃಷ್ಣ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಠಾಣೆ ಸಿಬ್ಬಂದಿ ಜನ್ಮಾಷ್ಟಮಿ ಆಚರಿಸಿದರು. ಪ್ರತಿಮೆಯನ್ನು ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಿದ್ದು, ಕೃಷ್ಣ ಜನ್ಮ ಸ್ಥಾನದ ನೆನಪು ಮಾಡಿಸಿತು. ನಂತರ ಪ್ರಸಾದ ವಿತರಿಸಲಾಯಿತು.
ಕೆ.ಆರ್.ಠಾಣೆಯ ವೃತ್ತ ನಿರೀಕ್ಷಕ ನಾಗೇಗೌಡ.ಎನ್.ಸಿ, ಸಬ್ ಇನ್ಸ್‍ಪೆಕ್ಟರ್ ಹರೀಶ್, ಪಿ.ಆರ್.ಮಂಜು, ಮಹಿಳಾ ಪೇದೆಗಳಾದ ನಂದಿನಿ, ಅರ್ಪಿತ, ಆಶಿ ಲೋಕೇಶ್, ಮುಖಂಡರಾದ ಕೆಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ನಜರ್‍ಬಾದ್ ನಟರಾಜ್, ಜಿ.ರಾಘವೇಂದ್ರ, ನವೀನ್ ಕೆಂಪಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ವಿನೋದ್ ರಾಜ್, ಸಂತೋಷ್ ಕಿರಾಳು, ನಿವೃತ್ತ ಪೆÇಲೀಸ್ ಅಧಿಕಾರಿ ಬೀರೇಗೌಡ, ಹರೀಶ್ ನಾಯ್ಡು, ಎಸ್.ಎನ್. ರಾಜೇಶ್, ರಾಕೇಶ್, ರವಿಚಂದ್ರ, ಕನಕ ಮೂರ್ತಿ ಹಾಜರಿದ್ದರು.
ರಾಧಾ-ಕೃಷ್ಣರಾದ ಚಿಣ್ಣರು:
ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣಧಾಮ ಆಯೋಜಿಸಿದ್ಧ ವೇಷಭೂಷಣ ಸ್ಪರ್ಧೆಯಲ್ಲಿ ಚಿಣ್ಣರು ರಾಧೆ, ಕೃಷ್ಣರಾಗಿ ಮಿಂಚಿದರು.
ಈ ವೇಳೆ ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿ ಶಾಸ್ತ್ರಿ ಮಾತನಾಡಿ, ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರವೂ ಜೀವನ ಸಾರ ತಿಳಿಸುತ್ತವೆ. ಶಿಷ್ಟರ ರಕ್ಷಣೆಗಾಗಿ ದುಷ್ಟರ ಸಂಹಾರ ಮಾಡುವ ಮೂಲಕ ಶ್ರೀಕೃಷ್ಣನ ಬಾಲ್ಯದ ಲೀಲೆಗಳು ಮಕ್ಕಳಿಗೆ ಪ್ರೇರಣದಾಯಕವಾಗಲಿವೆ. ಮಹಾಭಾರತ, ರಾಮಾಯಣ, ಇತಿಹಾಸ ಪುರುಷರ ಜೀವನ ಚರಿತ್ರೆ ತಿಳಿಸುವ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು. ಕಲಿಕೆಯಲ್ಲಿ ಮಕ್ಕಳಿಗೆ ಉತ್ತಮ ನೀತಿ ಪಾಠ, ಹಾಗೂ ಶ್ರೀ ಕೃಷ್ಣ ಲೋಕಕಲ್ಯಾಣಕ್ಕಾಗಿ ಮಾಡಿದ ಸಾಧನೆಗಳ ಬಗ್ಗೆ ತಿಳುವಳಿಕೆ ಮೂಡಿಸಬೇಕು ಎಂದರು.
ಸ್ಪರ್ಧೆಯಲ್ಲಿ ನೂರಕ್ಕೂ ಹೆಚ್ಚು ಮಕ್ಕಳು ಶ್ರೀ ಕೃಷ್ಣ ಮತ್ತು ರಾಧೆಯ ವೇಷಭೂಷಣ ಧರಿಸಿದ್ದರು. ಉತ್ತಮವಾಗಿ ಶ್ರೀ ಕೃಷ್ಣ, ರಾಧೆ ವೇಷಧರಿಸಿದ ಮಕ್ಕಳಿಗೆ ಬಹುಮಾನ ನೀಡಲಾಯಿತು. ಶ್ರೀಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷ ಪ್ರವೀಣ್ ರಾವ್, ಉಪಾಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ರಾಘವೇಂದ್ರ, ಶ್ರೀವತ್ಸ, ಮುರಳಿ, ಮಂಗಳ ಹಾಜರಿದ್ದರು.
ಗೋ ಪೂಜೆ, ಮೇವು ವಿತರಣೆ:
ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಗರದ ನಂಜುಮಳಿಗೆ ಸಮೀಪದ ವೇಣುಗೋಪಾಲ ಕೃಷ್ಣ ಸ್ವಾಮಿ ದೇವಸ್ಥಾನದ ಮುಂಭಾಗ ಅಪೂರ್ವ ಸ್ನೇಹ ಬಳಗದ ವತಿಯಿಂದ ಗೋ ಪೂಜೆ ಮಾಡಿ ಗೋವುಗಳಿಗೆ ಮೇವು ವಿತರಿಸಲಾಯಿತು.
ನಂತರ ಮಾತನಾಡಿದ ಮಾಜಿ ನಗರಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್, ಕೃಷ್ಣ ಪರಮಾತ್ಮ ಬೋಧಿಸಿದ ಗೀತೋಪದೇಶದ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಉತ್ತಮ ಸಮಾಜ ನಿರ್ಮಾಣ ಮಾಡಬೇಕು. ಭಾರತದಲ್ಲಿ ಮಾತ್ರವಲ್ಲದೇ ಜಗತ್ತಿನ ಎಲ್ಲ ರಾಷ್ಟ್ರಗಳಲ್ಲೂ ಕೃಷ್ಣನನ್ನು ಆರಾಧಿಸುತ್ತಾರೆ. ಜಯಂತಿಯನ್ನು ವಿಶ್ವದಾದ್ಯಂತ ವಿವಿಧ ರಾಜ್ಯಗಳು ವಿಜೃಂಭಣೆಯಿಂದ ಆಚರಿಸುತ್ತಿರುವುದು ಕೃಷ್ಣನ ಜನಪ್ರಿಯತೆಯನ್ನು ಪ್ರತಿಬಿಂಬಿಸುತ್ತದೆ ಎಂದರು.
ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ಅಂಬಳೆ ಶಿವಣ್ಣ, ರಾಕೇಶ್, ಆನಂದ್, ಪ್ರಕಾಶ್, ಧನರಾಜ್ ಇದ್ದರು.
ಇಸ್ಕಾನ್ ದೇವಸ್ಥಾನದಲ್ಲಿ ಆಚರಣೆ:
ಜಯನಗರದಲ್ಲಿರುವ ಇಸ್ಕಾನ್‍ನಲ್ಲಿ ಸೋಮವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀಕೃಷ್ಣ ಹಾಗೂ ಬಲರಾಮನ ವಿಗ್ರಹಗಳಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.
ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಇಡೀ ದೇಗುವ ವಿವಿಧ ಬಗೆಯ ಹೂಗಳಿಂದ ಅಲಂಕೃತಗೊಂಡಿತ್ತು. ಬೆಳಗ್ಗೆಯಿಂದಲೇ ಭಕ್ತರು ಇಸ್ಕಾನ್ ದೇವಸ್ಥಾನಕ್ಕೆ ಆಗಮಿಸಿ ಕೃಷ್ಣನÀ ದರ್ಶನ ಪಡೆದರು. ಬೆಳಗ್ಗೆಯಿಂದ ಮಧ್ಯರಾತ್ರಿ 12 ಗಂಟೆವರೆಗೂ ಭಕ್ತರಿಗೆ ದರ್ಶನದ ಅವಕಾಶ ಕಲ್ಪಿಸಲಾಗಿತ್ತು. ಜತೆಗೆ ಪ್ರಸಾದ ವಿತರಣೆ ಮಾಡಲಾಯಿತು.