ರಾಜ್ಯಪಾಲರ ನಡೆಯನ್ನು ಖಂಡಿಸಿ ಆ.೨೯ರಂದು ಜಿಲ್ಲಾ ಕೇಂದ್ರಗಳಲ್ಲಿ ಡಿಎಸ್‌ಎಸ್ ಪ್ರತಿಭಟನೆ
ಸಂಜೆವಾಣಿ ವಾರ್ತೆ,
ವಿಜಯಪುರ,ಆ.೨೭:ಜನತಂತ್ರ ವ್ಯವಸ್ಥೆಯನ್ನು ಬುಡಮೇಲ ಮಾಡಲು ಹೊರಟಿರುವ ಬಿಜೆಪಿ-ಜೆಡಿಎಸ್ ನಡೆಯನ್ನು ಖಂಡಿಸಿ ಹಾಗೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರವನ್ನು ಬೆಂಬಲಿಸಿ ಬೃಹತ್À ಪ್ರತಿಭಟನಾ ಮೆರವಣಿಗೆಯನ್ನು ಆ. ೨೯ ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ ಸಂಚಾಲಕ ಡಿ.ಜಿ. ಸಾಗರ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಪಕ್ಷಗಳು ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮತ್ತು ಸಂವಿಧಾನ ವಿರೋಧಿ ಪಕ್ಷಗಳಾಗಿವೆ. ಜನಪರ ಆಡಳಿತ ನೀಡುವೆವು ಎಂದು ಸಬಕಾ ಸಾಥ್ ಸಬಕಾ ವಿಕಾಸ ಎಂದು ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಿಜೆಪಿಯೇತರ ಸರ್ಕಾರದ ಜನರಿಂದ ಆಯ್ಕೆಯಾಗಿದ್ದ ಬಹುಮತದ ಸರ್ಕಾರಗಳನ್ನು ಕೆಡವುತ್ತಾ ಬರುತ್ತಿದೆ. ಈಗ ಜನರಿಂದ ಆಯ್ಕೆಯಾದ ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವನ್ನು ಇಟ್ಟುಕೊಂಡು ತನ್ನ ಚಾಳಿಯನ್ನು ಪ್ರಾರಂಭಗೊಳಿಸುತ್ತಿದೆ. ಮುಡಾ ಪ್ರಕರಣದ ಸಂಬAಧ ಮುಖ್ಯಮಂತ್ರಿ ಸಿದ್ದರಾಮಯ್ಯನÀವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ತೀವ್ರವಾಗಿ ವಿರೋಧಿಸುತ್ತೇವೆ ಎಂದರು.
ಹಿAದುಳಿದ ಸಮುದಾಯದಿಂದ ಬಂದ ಶೋಷಿತರ ಧೀಮಂತ ನಾಯಕ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯನವರನ್ನು ಮುಖ್ಯ ಮಂತ್ರಿ ಸ್ಥಾನದಿಂದ ಕಿತ್ತುಹಾಕಬೇಕೆಂದು ಮನುವಾದಿಗಳ ಪಕ್ಷವಾದ ಬಿಜೆಪಿ-ಜೆಡಿಎಸ್ ಕುತಂತ್ರವನ್ನು ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಜನರಿಂದ ಆಯ್ಕೆಯಾದ ರಾಜ್ಯ ಕಾಂಗ್ರೆಸ್ ಬಹುಮತದ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವಾಗಿದೆ. ರಾಜ್ಯದ ಎಲ್ಲಾ ಕಾಲದಲ್ಲಿ ದ್ವೇಷದ ರಾಜಕಾರಣವನ್ನು ಉಸಿರಾಡುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರು ರಾಜಭವನವನ್ನು ಹಾಗೂ ರಾಜ್ಯಪಾಲರನ್ನು ದುರಪಯೋಗ ಮಾಡಿಕೊಳ್ಳಲಾಗುತ್ತಿದೆ. ರಾಜ್ಯಪಾಲರ ನೋಟಿಸಿಗೆ ಜುಲೈ ೨೬ ರಂದು ಟಿ.ಜೆ. ಅಬ್ರಾಹಿಂ ದೂರು ದಾಖಲಿಸಿದ ಕೂಡಲೇ ರಾಜ್ಯಪಾಲರು ಸಿ.ಎಂ.ಗೆ ನೋಟಿಸು ನೀಡಿದ್ದಾರೆ. ರಾಜ್ಯದ ಸಂಪುಟ ಸಭೆಯಲ್ಲಿ ಸಿ.ಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ನೀಡಿರುವ ನೋಟಿಸ್ ಅನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಮಾಜಿ ಸಿ.ಎಂ ಹೆಚ್.ಡಿ ಕುಮಾರಸ್ವಾಮಿ, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿಯವರ ವಿರುದ್ಧ ದೂರು ನೀಡಲಾಗಿದ್ದರೂ ಇದುವರೆಗೆ ಯಾವುದೇ ಕ್ರಮವಾಗಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ದೂರು ಬಂದ ತಕ್ಷಣವೇ ವಿಚಾರಣೆಗೆ ಅನುಮತಿ ನೀಡಿರುವುದು ಯಾವ ನ್ಯಾಯ ಎಂದಿರುವ ಅವರು, ರಾಜ್ಯಪಾಲರ ಭವನ ಕೇಂದ್ರ ಬಿಜೆಪಿ ಸರ್ಕಾರದ ಅಡ್ಡಾ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಚಿಂತನೆ ನಡೆಸುವ ಮುಂಚೂಣಿ ನಾಯಕರಾಗಿದ್ದಾರೆ. ಕಳೆದ ೪೦ ವರ್ಷಗಳ ಕಾಲ ಅವರ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಜನರ ಸೇವೆ ಮಾಡಿದ್ದಾರೆ. ಆದರೆ ಈಗ ಆರ್.ಎಸ್.ಎಸ್.. ಬಿಜೆಪಿ ಮತ್ತು ಜೆಡಿಎಸ್ ಸೇರಿಕೊಂಡು ರಾಜ್ಯಪಾಲರ ಮೂಲಕ ಅವರ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಗಳ ನಾಯಕನೊಬ್ಬ ಎರಡನೆ ಬಾರಿ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡುತ್ತಿರುವುದು ಸಹಿಸಿಕೊಳ್ಳಲು ಸಾಧ್ಯವಾಗದೆ. ಇಂತಹ ಕೆಳಮಟ್ಟದ ನೀಚ ಕೆಲಸಕ್ಕೆ ಇಳಿದಿದ್ದಾರೆ ಎಂದು ಟೀಕಿಸಿದರು.
ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆ.೨೯ ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ ಎಲ್ಲಾ ಪ್ರಗತಿಪರರು, ಸಿದ್ದರಾಮಯ್ಯನವರ ಅಭಿಮಾನಿಗಳು ಬಂದು ಭಾಗವಹಿಸಬೇಕೆಂದು ಅವರು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣವರ, ವಾಯ್.ಸಿ. ಮಯೂರ, ಜಿಲ್ಲಾ ಡಿ.ಎಸ್.ಎಫ್‌ನ ರಮೇಶ ಧರಣಾಕರ, ಎಸ್.ಪಿ. ಸುಳ್ಳದ, ಸಾಹಿತಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.