ಕಾಂಗ್ರೆಸ್‌ನಿಂದ ಆಯ್ಕೆಯಾದವರಿಗೆ ಅಧ್ಯಕ್ಷ ಸ್ಥಾನ
ಚಿಕ್ಕಬಳ್ಳಾಪುರ.ಆ.೨೭- ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷಗಾತಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿನಿಂದ ಗೆಲುವು ಸಾಧಿಸಿದವರು ಮಾತ್ರ ಅಧ್ಯಕ್ಷರಾಗಿ ಆಯ್ಕೆಯಾಗುವರು ಎಂದು ಶಾಸಕ ಪ್ರದೀಪೇಶ್ವರ್ ತಿಳಿಸಿದರು.
ಇಂದು ಬೆಳಗ್ಗೆ ತಹಸಿಲ್ದಾರ್ ಕಚೇರಿ ಪ್ರಾಂಗಣದಲ್ಲಿರುವ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಿಸಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಒಟ್ಟು ೩೧ ಸ್ಥಾನಗಳಿದ್ದು ೧೬ ಮಂದಿ ಸದಸ್ಯರುಗಳು ಕಾಂಗ್ರೆಸ್ ಪಕ್ಷದ ಹಸ್ತದ ಗುರುತು ನಿಂದ ಆಯ್ಕೆ ಆಗಿದ್ದಾರೆ ಹೀಗಾಗಿ ಕಾಂಗ್ರೆಸ್ ಪಕ್ಷದವರೇ ಅಧ್ಯಕ್ಷರಾಗುತ್ತಾರೆ ಒಂದು ವೇಳೆ ಕಾಂಗ್ರೆಸ್ ಪಕ್ಷದಿಂದ ಗೆದ್ದವರು ಯಾರೇ ಆದರೂ ಅಡ್ಡ ಮತದಾನ ಮಾಡಿದ್ದಾರೆ ಅಂತಹವರನ್ನು ನಿರ್ಧಾಕ್ಷಿಣ್ಯವಾಗಿ ೬ ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು ಎಂದರು.
ರಾಜ್ಯದಲ್ಲಿ ಸಿದ್ದರಾಮಯ್ಯ ಪ್ರವರ ಕೈ ಬಲಪಡಿಸುವುದು ನಮ್ಮ ಮೂಲ ಗುರಿಯಾಗಿದೆ ಸಿದ್ದರಾಮಯ್ಯ ಅವರ ಸರ್ಕಾರವನ್ನು ಅಸ್ಥಿರಗೊಳಿಸುವುದಕ್ಕೆ ಅಥವಾ ಆಪರೇಷನ್ ಕಮಲ ಮಾಡುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ ನಾವು ೧೩೫ ಜನ ಕಾಂಗ್ರೆಸ್ ಶಾಸಕರಿದ್ದಾರೆ ಇದನ್ನು ವಿರೋಧ ಪಕ್ಷಗಳವರು ತಿಳಿದುಕೊಳ್ಳಬೇಕು ಎಂದು ಟೀಕಿಸಿದರು.
ನಗರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಪಕ್ಷದಿಂದ ಪಕ್ಷಕ್ಕೆ ಹಾರುವವರನ್ನು ಸಮಯ ಸಾಧಕ ಸದಸ್ಯರನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಸಹಿಸುವುದಿಲ್ಲ ನಿಷ್ಠಾವಂತ ಕಾಂಗ್ರೆಸ್ ಸದಸ್ಯರೊಬ್ಬರು ನಗರಸಭೆ ಅಧ್ಯಕ್ಷರಾಗುತ್ತಾರೆ ಎಂದು ತಿಳಿಸಿದರು
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರಿಗೆ ರಾಜಕೀಯವಾಗಿ ಯಾರೂ ಬೆಳೆಯಲು ಇಷ್ಟಪಡುವುದಿಲ್ಲ ತಮ್ಮ ಒಕ್ಕಲಿಗ ಜನಾಂಗದವರೆ ಆದ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಆದರೆ ಅವರನ್ನು ಸಹಿಸುವುದಿಲ್ಲ ಅಹಿಂದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯರವರು ಮುಖ್ಯಮಂತ್ರಿ ಆಗಿದ್ದರೆ ಅವರನ್ನು ಸಹಿಸುವುದಿಲ್ಲ ಕೊನೆಗೆ ಅವರ ಸಂಬಂಧಿಕರ ರಾಜಕೀಯ ಏಳಿಗೆಯನ್ನು ಸಹಿಸುವುದಿಲ್ಲ ಎಚ್ ಡಿ ಕುಮಾರಸ್ವಾಮಿ ರವರ ನಿಲುವನ್ನು ಅವರೇ ಅರ್ಥ ಮಾಡಿಕೊಳ್ಳಬೇಕೆ ಹೊರತು ಬೇರೆಯವರಿಗೆ ಅರ್ಥಮಾಡಿಕೊಳ್ಳಲು ಆಗುವುದಿಲ್ಲ ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿದರು.