ಶ್ರೀ ಕೃಷ್ಣ ಜನ್ಮಾಷ್ಟಮಿ, ಅಧಿಕಾರಿಗಳು ಭಾಗಿ
ಕೋಲಾರ, ಆ.೨೭- ಆರೋಗ್ಯ ಇಲಾಖೆಯ ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ಜಿ.ಪ್ರಸನ್ನ ಕುಮಾರ್ ಅವರ ನಿವಾಸದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು,
ಆರೋಗ್ಯ ಇಲಾಖೆಯ ಅಧಿಕಾರಿಗಳು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವಾರು ಮಂದಿ ಆಗಮಿಸಿ ಶ್ರೀ ಕೃಷ್ಣ ಪರಮಾತ್ಮನಿಗೆ ಪೂಜೆ ಸಲ್ಲಿಸಿ ಧನ್ಯರಾದರು.
ಈ ಸಂದರ್ಭದಲ್ಲಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಎನ್.ವಿಜಯ ಲಕ್ಷ್ಮಿ, ,ವಕೀಲ ಜಿ.ವಿಜಯಕುಮಾರ್, ಜಿಲ್ಲಾ ನೌಕರರ ಸಂಘದ ಗೌರವಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ, ಗೌರವಾಧ್ಯಕ್ಷ ರವಿಚಂದ್ರ, ನಿಕಟಪೂರ್ವ ಅಧ್ಯಕ್ಷರುಗಳಾದ ಕೆ.ಎನ್. ಮಂಜುನಾಥ್, ಕೆ.ಬಿ.ಅಶೋಕ್, ಸಂಘಟನಾ ಕಾರ್ಯದರ್ಶಿ ಪ್ರೇಮ ಮತ್ತು ಆರೋಗ್ಯ ಇಲಾಖೆಯ ಹಲವಾರು ಸಿಬ್ಬಂದಿ, ಪಿಡಿಒ ನಾಗರಾಜ್ ಮತ್ತಿತರರು ಹಾಜರಿದ್ದರು.