೨ನೇ ಅಂಗನವಾಡಿ ಕೇಂದ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ
ಕೋಲಾರ,ಆ.೨೭:ನಗರದ ಕಠಾರಿಪಾಳ್ಯದ ೨ನೇ ಅಂಗನವಾಡಿ ಕೇಂದ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಕ್ಕಳು ರಾಧೆ, ಕೃಷ್ಣೆಯರ ವೇಷಗಳನ್ನು ಧರಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಬಿ.ಇ.ಓ ಕನ್ನಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿನೋದ್‌ರಾಜ್, ಬಿ.ಆರ್.ಸಿ.ಪ್ರವೀಣ್‌ಕುಮಾರ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೊಟೇಶ್ವರ, ಮೇಲ್ವಿಚಾರಕಿ ರಚನಾ ಆಕಟೆ, ಪೋಷಣ್ ಅಭಿಯಾನದ ಸಂಯೋಜಕಿ ಸಂಗೀತ ನೀಮಾ, ಅಂಗನವಾಡಿ ಕಾರ್ಯಕರ್ತೆ ಕವಿತಾ ಎ ಸೇರಿದಂತೆ ಶಾಲೆಯ ಸಹ ಶಿಕ್ಷಕರು, ಶಿಕ್ಷಕಿಯರು, ಮಕ್ಕಳು ಮತ್ತು ಪೋಷಕರು ಇದ್ದರು.