ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷರ ಪ್ರವಾಸ
ಕಲಬುರಗಿ:ಆ.26:ಜೇವರ್ಗಿ ಶಾಸಕರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಅಜಯ ಧರ್ಮಸಿಂಗ್ ಅವರು ಆಗಸ್ಟ್ 27 ರಂದು ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಅಂದು ಮಧ್ಯಾಹ್ನ 12 ಗಂಟೆಗೆ ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ 30 ದಿನಗಳ ಕಂಪ್ಯೂಟರ್ ಹಾರ್ಡ್‍ವೇರ್ ಆಂಡ್ ನೆಟ್‍ವರ್ಕಿಂಗ್ ಹಾಗೂ ಬ್ಯೂಟಿ ಪಾರ್ಲರ್ ಮ್ಯಾನೇಜ್‍ಮೆಂಟ್ ಕುರಿತು ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಕಲಬುರಗಿ ಮತ್ತು ಜೇವರ್ಗಿಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಆಗಸ್ಟ್ 28 ರಂದು ಬುಧವಾರ ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ಮತ್ತು ಜೇವರ್ಗಿಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಆಗಸ್ಟ್ 29 ರಂದು ಗುರುವಾರ ಕಲಬುರಗಿ ಮತ್ತು ಜೇವರ್ಗಿಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.