ಭೀಮಾ ನದಿಗೆ ಅಪಾರ ಪ್ರಮಾಣ ನೀರು ನದಿ ದಂಡೆಯಲ್ಲಿರುವ ಜನರು ಎಚ್ಚರಿಕೆಯಿಂದ ಇರಲು ಕಲಬುರಗಿ ಡಿ.ಸಿ. ಮನವಿ
ಕಲಬುರಗಿ:ಆ.26: ಮಹಾರಾಷ್ಟ್ರ ರಾಜ್ಯದ ಉಜ್ಜನಿ ಮತ್ತು ವೀರ ಜಲಾಶಯದಿಂದ ಭೀಮಾ ನದಿಗೆ 1.41 ಲಕ್ಷ ಕ್ಯುಸೆಕ್ ನೀರು ಹೊರಗಡೆ ಬಿಡಲಾಗುತ್ತಿದ್ದು, ನೀರು ಅಫಜಲಪೂರ ತಾಲ್ಲೂಕಿನ ಭೀಮಾ ಸೊನ್ನ ಬ್ಯಾರೇಜಿಗೆ ಇಂದು ಬಂದು ತಲುಪುತ್ತದೆ. ಈಗಾಗಲೇ ಸೊನ್ನ ಬ್ಯಾರೇಜ್‍ನಿಂದ 23,500 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದ್ದಾರೆ.
ಉಜ್ಜನಿ ಮತ್ತು ವೀರ ಜಲಾಶಯದ ನೀರು ಬಂದ ನಂತರ ಸೊನ್ನ ಬ್ಯಾರೇಜಿನಿಂದ ಇನ್ನೂ ಹೆಚ್ಚಿನ ಗೇಟ್‍ಗಳ ಮೂಲಕ ಭೀಮಾ ನದಿಗೆ ನೀರು ಹರಿ ಬಿಡಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಸೊನ್ನ ಬ್ಯಾರೇಜ್ ಕೆಳಗಡೆ ಇರುವ ನದಿ ಪಾತ್ರದ ಜನರು ಹಾಗೂ /ತಾಲೂಕು/ಹೋಬಳಿ/ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಈ ಕೆಳಗಿನಂತೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಜಿಲ್ಲಾ/ತಾಲೂಕು/ಹೋಬಳಿ/ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿದ್ದು ಪ್ರವಾಹ/ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನಚ್ಚರಿಕೆಯನ್ನು ವಹಿಸುವುದು.
ಪ್ರವಾಹ ದಿಂದ ಉಂಟಾಗುವ ನೆರೆ ಪರಿಸ್ಥಿಯನ್ನು ನಿಭಾಯಿಸಲು ನಗರ ಮತ್ತು ಗ್ರಾಮೀಣ ಪ್ರದೇಶದ ತಗ್ಗು ಪ್ರದೇಶಗಳನ್ನು ಜನರನ್ನು ಗುರುತಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವದು, ಹಾಗೂ ಗುರುತಿಸಲಾದ ಕಾಳಜಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಸ್ಥಳ ಪರಿಶೀಲನೆ ಮಾಡುವುದು.
ನದಿ/ಹಳ್ಳ/ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ಧನ/ಕರುಗಳನ್ನು ಮೆಹಿಸುವುದು ಹಾಗೂ ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಸಾರ್ವಜನಿಕರಗಾಗಿ ತಿಳಿಸಲಾಗಿದೆ.
ನದಿ/ಹಳ್ಳ/ಕೆರೆ ದಡದಲ್ಲಿರುವ ಗುಡಿ/ಮಸಿದಿ/ಚರ್ಚ ಗಳಲ್ಲಿ ಪೊಜೆ ಹಾಗೂ ಭಾಗಿಣಾ ಸಲ್ಲಿಸುವವರನ್ನು ಮನವೊಲಿಸಿ ನದಿ/ಹಳ್ಳ/ಕೆರೆ ದಡದಲ್ಲಿ ತೆರಳದಂತೆ ಮುನ್ನಚ್ಚರಿಕೆ ತೆಗೆದುಕೊಳ್ಳುವುದು.
ನಿರಂತರ ಮಳೆಯಿಂದ ಅಪಾಯವಿರುವ ಮನೆ ಗೋಡೆ ಶಾಲೆಗಳು ಹಾಗೂ ಇತರೆ ಕಟ್ಟಡಗಳ ಕುಸಿಯುವ ಸಾದ್ಯತೆ ಇರುವದರಿಂದ ಸಾವು ನೋವುಗಳು ಸಂಭವಿಸುವ ಸಂದರ್ಭವಿರುತ್ತದೆ. ಆದ್ದರಿಂದ ಸಾರ್ವಜನಿಕರಿಗೆ ಸುರಕ್ಷತೆಯ ಮುನ್ನೆಚ್ಚಿರಿಕೆಯ ಕ್ರಮ ತೆಗೆದುಕೊಳ್ಳುಲು ತಿಳಿಸಲಾಗಿದೆ
ನದಿ ತೀರದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಅಪಾಯವಿರುವ ನದಿ/ಹಳ್ಳಗಳಲ್ಲಿ ಈಜಾಡುವುದು ಮತ್ತು ಪೋಟೊ/ಸೆಲ್ಪಿಗಳನ್ನು ತೆಗೆಯದಂತೆ ತಿಳಿಸಲಾಗಿದೆ.
ಮೀನುಗಾರರಿಗೆ ಮೀನು ಹಿಡಿಯಲು ನದಿಯಲ್ಲಿ ಹೋಗದಂತೆ ಮುನ್ನಚರಿಕೆ ಕ್ರಮಗೊಳ್ಳುವುದು.
ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವುದು/ಮೈಕ್ ಮೂಲಕ ಜಾಗೃತಿ ಮುಡಿಸಲು ಅಧಿಕಾರಿಗಳು ಕ್ರಮವಹಿಸುವುದು.
ಪ್ರವಾಹದಿಂದ ಹಾನಿಯಾದ ಬಗ್ಗೆ ಪ್ರಾಥಮಿಕ ವರದಿಯನ್ನು ಪ್ರತಿ ದಿನ ಜಿಲ್ಲಾಡಳಿತಕ್ಕೆ ಸಲ್ಲಿಸುವುದು.
ಕಲಬುರಗಿ ಜಿಲ್ಲೆಯ ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿ/ಸಿಬ್ಬಂಧಿಗಳಿಗೆ ಪ್ರವಾಹ/ಭಾರಿ ಮಳೆಯಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನಚ್ಚರಿಕೆಯನ್ನು ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಲಾಗಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.