ಬೂತ್ ಮಟ್ಟದಿಂದ ಜೆಡಿಎಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿ : ಮಾಜಿ ಶಾಸಕ ಡೊಂಗರಗಾಂವ
ಅಥಣಿ :ಆ.26: ಸದಸ್ಯತ್ವ ಹೆಚ್ಚಳದಿಂದ ಪಕ್ಷ ಸಂಘಟನೆಗೆ ಬಲ ಬರುತ್ತದೆ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲೆಗಳಲ್ಲಿ ಪಕ್ಷವನ್ನು ಬಲ ಪಡಿಸುವ ನಿಟ್ಟಿನಲ್ಲಿ ಸದಸ್ಯತ್ವ ನೋಂದಣಿ ಅಭಿಯಾನವನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಪ್ರಾರಂಬಿಸಲಾಗಿದ್ದು ಸದ್ಯದಲ್ಲೇ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಬರಲಿದ್ದು, ಸದಸ್ಯತ್ವ ನೋಂದಣಿ ಕಾರ್ಯ ಚುರುಕಾಗಬೇಕು’ ಎಂದು ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಸೂಚಿಸಿದರು.
ಅವರು ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಉಸ್ತುವಾರಿಗಳಾಗಿ ಭಾಗವಹಿಸಿ ಮಾತನಾಡಿದರು ಜಿಲ್ಲಾ ಮಟ್ಟ. ತಾಲೂಕ ಮಟ್ಟ. ಹೋಬಳಿ ಮಟ್ಟ. ಬ್ಲಾಕ್ ಮಟ್ಟ ಹಾಗೂ ಬೂತ್ ಮಟ್ಟದ ಸಮಿತಿಗಳನ್ನು ರಚಿಸಲು ಕೈಗೊಳ್ಳಬೇಕಾದ ರೂಪುರೇಷೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.
ಸದಸ್ಯರಾಗುವವರ ವಿವರಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಸದಸ್ಯತ್ವ ಶುಲ್ಕವನ್ನು ನೇರವಾಗಿ ಪಡೆದುಕೊಳ್ಳುವ ಕುರಿತು ವಿವರಿಸಿದರು.
ಪಕ್ಷವನ್ನು ಬೇರುಮಟ್ಟದಿಂದ ಬಲಪಡಿಸಲು ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಆಯ್ಕೆಯಾಗುವಂತೆ ನೋಡಿಕೊಳ್ಳುವುದು ಬಿಜೆಪಿ ಜೊತೆ ಹೊಂದಾಣಿಕೆಯಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಹುಮತ ಪಡೆಯುವ ನಿಟ್ಟಿನಲ್ಲಿ ಶ್ರಮಿಸಬೇಕು. ಹಾಗೂ ಪಕ್ಷವನ್ನು ಸದೃಢಗೊಳಿಸಬೇಕು ಎಂದು ಕರೆ ನೀಡಿದರು.
ಈ ವೇಳೆ ಜೆಡಿಎಸ್ ರಾಜ್ಯ ಕಾರ್ಯಧ್ಯಕ್ಷ ಹಾಗೂ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲಾ ಉಸ್ತುವಾರಿಗಳಾದ ಅಲ್ಕೋಡ್ ಹನುಮಂತಪ್ಪ ಮಾತನಾಡಿ ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಕಾರ್ಯಕ್ರಮಗಳನ್ನು ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ದೇಶಕ್ಕೆ ಮತ್ತು ರಾಜ್ಯಕ್ಕೆ ನೀಡಿದ ಕೊಡುಗೆಯನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ನಂತರ ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ ಮಾತನಾಡಿ ಜೆಡಿಎಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಸಲುವಾಗಿ ಜಿಲ್ಲಾಮಟ್ಟದ. ತಾಲೂಕ ಮಟ್ಟದ ಹಾಗೂ ಬೂತ್ ಮಟ್ಟದ ಕಮಿಟಿಗಳನ್ನು ರಚಿಸುವ ಕುರಿತು ಮಾರ್ಗಸೂಚಿಯನ್ನು ವಿವರಿಸಿದರು.
ಈ ವೇಳೆ ಸಭೆಯಲ್ಲಿ ಜೆಡಿಎಸ್ ಮುಖಂಡ ನಾಸೀರ ಬಾಗವಾನ ಸೇರಿದಂತೆ ಜಿಲ್ಲಾಧ್ಯಕ್ಷರುಗಳು. ಬ್ಲಾಕ್ ಅಧ್ಯಕ್ಷರುಗಳು. ಮುಖಂಡರು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು