ಥ್ರೋ ಬಾಲ್ ತಾಲ್ಲೂಕು ಮಟ್ಟಕ್ಕೆ ಆಯ್ಕೆ
ಚಿಂಚೋಳಿ:ಆ.26: ತಾಲೂಕಿನ ಪೆÇೀಲಕಪಳ್ಳಿ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ವಲಯಮಟ್ಟದ ಕ್ರೀಡಾಕೂಟದಲ್ಲಿ ಸುಲೇಪೇಟ ನ ಶ್ರೀ ಗುರುನಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ,ಅಲ್ಲದೇ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆ ನಮ್ಮ ಶಾಲೆಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಖುಷಿಯನ್ನು ನೀಡಿದೆ ಎಂದು ಮುಖ್ಯಗುರು ಸೋಮನಾಥ ರೆಡ್ಡಿ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅದೇ ರೀತಿಯಾಗಿ ವಿದ್ಯಾರ್ಥಿಗಳ ಈ ಸಾಧನೆಗೆ ತಾಲ್ಲೂಕಿನ ದೈಹಿಕ ಶಿಕ್ಷಣ ಅಧಿಕಾರಿಗಳಾದ ನಾರಾಯಣ ರೆಡ್ಡಿ, ದೈಹಿಕ ಶಿಕ್ಷಕ ನರಸಿಂಹ ರೆಡ್ಡಿ ಸೇರಿದಂತೆ ಇನ್ನಿತರರು ಹರ್ಷವನ್ನು ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.