ನಾಮಫಲಕದ ಮೇಲ್ಬಾಗದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಪ್ರದರ್ಶಿಸಿ:ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ, ಅ.2: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024 ರನ್ವಯ ಬೀದರ ಜಿಲ್ಲಾ ವ್ಯಾಪ್ತಿಯಲ್ಲಿ ಪರವಾನಿಗೆ (ಅನುಮತಿ) ಪಡೆದು ನಡೆಸುವ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಎಲ್ಲಾ ರೀತಿಯ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಬೀದರ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.