ತಾಲೂಕಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಿತಿ ಮೀರಿದೆ
ದೇವದುರ್ಗ:ಆ೨೬: ತಾಲೂಕಿನ ಮಿನಿ ವಿಧಾನಸೌಧದಲ್ಲಿರುವ ಕಂದಾಯ ಇಲಾಖೆ ,ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ಪಿಡಬ್ಲ್ಯೂಡಿ ಇಲಾಖೆ, ಜಲ ಜೀವನ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಎಂದು ಬಹುಜನ ಸಮಾಜವಾದಿ ಪಕ್ಷದ ಜಿಲ್ಲಾ ಸಮಿತಿ ಅಧ್ಯಕ್ಷ ಬಿ. ವೆಂಕನಗೌಡ ನಾಯಕ ಆರೋಪಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಸೋಮವಾರ ಮಾತನಾಡಿದರು.
ಕಂದಾಯ ಇಲಾಖೆ, ಸಾರ್ವಜನಿಕ ಆಸ್ಪತ್ರೆ, ಭೂಮಾಪನ ಇಲಾಖೆ, ಕೃಷಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪಿಡಬ್ಲ್ಯೂಡಿ , ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡುಯುತ್ತಿದೆ. ಶಾಸಕಿ ಕರಮ್ಮ ಜಿ ನಾಯಕ ಗಮನ ಹರಿಸದೆ. ಬೆಂಗಳೂರಿನಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಎಂದು ದೂರಿದರು. ಹುಲಿಗುಡ್ಡ ದೇವತಗಲ್, ಸೇರಿ ತಾಲೂಕಿನ ಭೌತಿಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಶೌಚಾಲಯ, ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿ ವಿದ್ಯಾರ್ಥಿನಿಯರು. ಪರದಾಡುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಂದ ಅಂಗವಾಡಿಗಳಿಗೆ ವಿತರಣೆ ಮಾಡುತ್ತಿರುವ ಮೊಟ್ಟೆಗಳಿ ಮಾರಿ ಗೋಲ್ ಮಾಲ್ ನಡೆಯುತ್ತಿದೆ. ಗ್ರಾಮೀಣ ಭಾಗದಿಂದ ಬರುವ ರೈತರು ಹಾಗೂ ವೃದ್ಧರು ಕೆಲಸ ಕಾರ್ಯಗಳು ಆಗುತ್ತಿಲ್ಲ. ಕಚೇರಿಗಳಲ್ಲಿ ಕೆಲಸವಾಗಬೇಕಾದರೆ. ಅಧಿಕಾರಿಗಳಿಗೆ ಇಂತಿಷ್ಟು ಹಣ ನೀಡಬೇಕು. ಇಲ್ಲದೆ ಹೋದರೆ. ನಿಮ್ಮ ಕೆಲಸ ಮಾಡಿಕೊಡಲಾಗುವುದಿಲ್ಲ ಎಂದು ಅಧಿಕಾರಿಗಳು ಬಹಿರಂಗವಾಗಿ ಹೇಳುತ್ತಿದ್ದಾರೆ. ಹೀಗಾಗಿ ಶಾಸಕಿ ಹಾಗೂ ತಾಲೂಕ ಆಡಳಿತ ವಿರುದ್ಧ ಜನ ಹಿಡಿ ಶಾಪಹಾಕುತ್ತಿದ್ದಾರೆ. ಅಕ್ರಮ ಮರಳು . ಮಟ್ಕಾ ಜುಜಾಟ, ಅಕ್ರಮ ಮಧ್ಯ ಮಾರಾಟ. ತಾಲೂಕಿನ ಆದ್ಯಂತ ರಾಜರುಷವಾಗಿ, ದಿನನಿತ್ಯ ನಡೆಯುತ್ತಿದ್ದರು. ಶಾಸಕರು ಕಿಚ್ಚ ಗಮನ ಹರಿಸಿಲ್ಲ. ಸರ್ವಾಂಗೀಣ ಅಭಿವೃದ್ಧಿ ಭ್ರಷ್ಟಾಚಾರ ಮುಕ್ತ ತಾಲೂಕು ಮಾಡುತ್ತೇನೆ ಎಂದು ಜನರ ಬಳೆ ಆಶ್ವಾಸನೆ ನೀಡಿ ಶಾಸಕರಾಗಿ ಆಯ್ಕೆಯಾಗಿ. ಜನರ ಹಿತ ಮರೆತಿದ್ದಾರೆ. ಅಲ್ಲದೆ ಶಾಸಕರು ತಾಲೂಕಿನಲ್ಲಿ ಇದ್ದುಕೊಂಡು ತಾಲೂಕಿನ ರೈತರ, ಕೂಲಿ ಕಾರ್ಮಿಕರ, ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ತಾಲೂಕಿನ ಜನರ ಕೆಲಸ ಕಾರ್ಯಗಳು ಮಾಡಿಕೊಡಬೇಕು. ಪಟ್ಟಣದಲ್ಲಿ ಹದಗೆಟ್ಟಿರುವ ರಸ್ತೆಗಳು, ವಿದ್ಯುತ್ ದೀಪ ಚರಂಡಿ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ. ಒದಗಿಸಿ ಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬಿಎಸ್ಪಿ ಪಕ್ಷದ ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಜನರ ಸಮಸ್ಯೆ ತಿಳಿದುಕೊಂಡು ಮುಂದಿನ ದಿನಮಾನಗಳಲ್ಲಿ ಸಂಬಂಧಿಸಿದ ಇಲಾಖೆ ಮುಂದೆ ಪಕ್ಷದ ವತಿಯಿಂದ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಯೇಸು ಕಂಬಲದಿನ್ನಿ, ಯಲ್ಲಪ್ಪ ಕಾಕರಗಲ್, ರಾಜ್ ಮೊಹಮ್ಮದ್ ದೇವತಗಲ್, ಪ್ರದೀಪ್, ಸೇರಿದಂತೆ ಇತರರಿದ್ದರು.