ಗಂಗಾವತಿ ನಗರಸಭೆಗೆ ಈ ಬಾರಿ ಬಿಜೆಪಿಗೆ ಅಧಿಕಾರ ಬಹುತೇಕ ಫಿಕ್ಸ್
ಸಂಜೆವಾಣಿ ವಾರ್ತೆ
ಗಂಗಾವತಿ:ಅ,26- ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ಹಿನ್ನಲೆ ಈ ಬಾರಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನವನ್ನು ಬಿಜೆಪಿ ಪಕ್ಷ ಅಧಿಕಾರ ಹಿಡಿಯಲಿದೆ ಎಂಬ ಮಾಹಿತಿ ಹರಿದಾಡುತ್ತಿದೆ.
ಇಂದು ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಕುರಿತು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಪಕ್ಷದ ಸದಸ್ಯರ ಸೇರಿ ಒಟ್ಟು 27 ಜನ ಬೆಂಬಲದೊಂದಿಗೆ ಬಿಜೆಪಿ ಅಧಿಕಾರಕ್ಕೆರಲು ಸಜ್ಜಾಗಿದೆ. ಒಂದು ವಾರದಿಂದ ಶಾಸಕ ಜನಾರ್ಧನ ರೆಡ್ಡಿ ಹಾಗೂ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಸದಸ್ಯರನ್ನು ಪ್ರವಾಸಕ್ಕೆ ಕರೆದ್ಯೊದ್ದು, ಶಾಸಕ ರೆಡ್ಡಿ ಸೂಚಿಸಿದವರಿಗೆ ಅಧ್ಯಕ್ಷ ಉಪಾಧ್ಯಕ್ಷರು ಆಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿವೆ.
ಗಂಗಾವತಿ ಕಾಂಗ್ರೆಸ್ ನಲ್ಲಿ ಮೂರು ಬಣಗಳಾಗಿದ್ದು, ಸದಸ್ಯರನ್ನು ಒಂದು ಗೂಡಿಸುವ ಪ್ರಯತ್ನ ಮಾಡುತ್ತಿಲ್ಲ. ಯಾವುದೇ ಸಭೆ ಸಹ ನಡೆಸಿಲ್ಲ ಎನ್ನಲಾಗಿದೆ. ಈ ಬಾರಿ ಬಿಜೆಪಿ ನಗರಸಭೆ ಅಧಿಕಾರ ಹಿಡಿಯುವುದು ಖಚಿತವಾಗುತ್ತಿದೆ.
ಬಿಜೆಪಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹಲವರು ಪೈಪೋಟಿ ನಡೆಸಿದ್ದು, ಅಂತಿಮವಾಗಿ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬ ಮಾಹಿತಿ ಸಂಜೆ 3 ಗಂಟೆಗೆ ಫಲಿತಾಂಶ ದೊರೆಯಲಿದೆ.