ಕ್ರೀಡೆಯಿಂದಲೂ ಸಾಧನೆ ಮಾಡಿ ವಿದ್ಯಾರ್ಥಿಗಳಿಗೆ ಶಾಸಕ ಬಸವರಾಜು ವಿ ಶಿವಗಂಗಾ ಸಲಹೆ
ಸಂಜೆವಾಣಿ ವಾರ್ತೆ
ಚನ್ನಗಿರಿ.ಆ.೨೬: ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಿಂದಲೂ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರಬಹುದು ಎಂದು ವಿದ್ಯಾರ್ಥಿಗಳಿಗೆ ಶಾಸಕರಾದ ಬಸವರಾಜು ವಿ ಶಿವಗಂಗಾ ಸಲಹೆ ನೀಡಿದರು. ತಾಲ್ಲೂಕಿನ ಮೇದುಗೊಂಡನಹಳ್ಳಿಯ ಶ್ರೀ ಆಂಜನೇಯ ಪ್ರೌಢ ಶಾಲಾ ಆವರಣದಲ್ಲಿ ಚನ್ನಗಿರಿ ಗ್ರಾಮಾಂತರ ಮಟ್ಟದ ವಲಯ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಈ ವಿಷಯ ತಿಳಿಸಿದರು. ಪಠ್ಯದ ಜೊತೆಗೆ ಕ್ರೀಡೆಗಳಲ್ಲೂ ವಿದ್ಯಾರ್ಥಿಗಳು ಭಾಗವಹಿಸಿಬೇಕು, ಆಸಕ್ತಿ ಹಾಗೂ ಶ್ರಧ್ಧೆ ಇದ್ದರೆ ಜೀವನದಲ್ಲಿ ಯಾವುದೇ ಕ್ಷೇತ್ರವಿರಲಿ ಸಾಧನೆ ಮಾಡಿ ಹೆಸರು ತಂದುಕೊಳ್ಳ ಬಹುದೆಂದರು.ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಪೂರ್ಣ ಬೆಂಬಲ ನೀಡುತ್ತೇನೆ, ರಾಜ್ಯ,ರಾಷ್ಟದಲ್ಲಿ ಸಾಧನೆ ಮಾಡುವಂತ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ನೆರವು ದೊರಕಿಸಿಕೊಡಲು ಸಿದ್ಧ ಎಂದರು. ಕ್ರೀಡೆಯಿಂದ ಸಾಕಷ್ಟು ಅನುಕೂಲಗಳಿವೆ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬಹುದು, ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಶಾಸಕರಾದ ಬಸವರಾಜು ವಿ ಶಿವಗಂಗಾ ತಿಳಿಸಿದರು. ಕ್ರೀಡೆಯಲ್ಲಿ ಗೆದ್ದು ಪ್ರಶಸ್ತಿ ಪಡೆದು ಸಾಧನೆ ಮಾಡಿದವರಿಗೆ ಉದ್ಯೋಗದಲ್ಲೂ ಮೀಸಲಾತಿ ಸಿಗುತ್ತದೆ ಹೀಗಾಗಿ ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿಯೂ ಭಾಗಿಯಾಗಬೇಕು ತಮ್ಮ ಪ್ರತಿಭೆಗಳನ್ನು ಅನಾವರಣ ಮಾಡಬೇಕೆಂದರು. ಈ ವೇಳೆ ಬಿಇಓ, ದೈಹಿಕ ಶಿಕ್ಷಣ ಅಧಿಕಾರಿಗಳು ಗ್ರಾಮ ಪಂಚಾಯಿ ಆಡಳಿತ ಮಂಡಳಿ ಮತ್ತು ಶಾಲಾ ಅಭಿವೃದ್ಧಿ ಸಮಿತಿ, ಗ್ರಾಮದ ಮುಖಂಡರು ಸೇರಿದಂತೆ ಕ್ರೀಡಾಕೂಟಕ್ಕೆ ಪ್ರೋತ್ಸಾಹಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.