ಮಹಾತ್ಮಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ
ಬಳ್ಳಾರಿ, ಅ.02 ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಣೆ ಮಾಡಲಾಯಿತು.
ಸಂಸ್ಥೆಯ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜೀ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ, ಪ್ರಭಾರಿ ಅಧ್ಯಕ್ಷರಾದ ಬಿ.ಮಹಾರುದ್ರಗೌಡ, ಗೌರವ ಕಾರ್ಯದರ್ಶಿಗಳಾದ ಕೆ.ಸಿ.ಸುರೇಶಬಾಬು, ಹಿರಿಯ ಉಪಾಧ್ಯಕ್ಷರಗಳಾದ ಅವ್ವಾರು ಮಂಜುನಾಥ, ಎಸ್.ದೊಡ್ಡನಗೌಡ, ಸೊಂತ ಗಿರಿಧರ, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ.ರಾಮಚಂದ್ರ, ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು  ಉಪಸ್ಥಿತರಿದ್ದು ಗೌರವ ಸಲ್ಲಿಸಿದರು.