ರಾಜ್ಯಮಟ್ಟಕ್ಕೆ ಆಯ್ಕೆ
ಕಲಬುರಗಿ:ಅ.2:ಸರ್ಕಾರಿ ಪದವಿ ಪೂರ್ವ ಕಾಲೇಜು, ಸ್ಟೇಷನ್ ಬಜಾರ್ ಕಲ್ಬುರ್ಗಿಯ ವಿದ್ಯಾರ್ಥಿಗಳು ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಸ್ಪರ್ಧೆಯಲ್ಲಿ ಗಣನೀಯ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಪಿಯುಸಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಭರತ್ 100 ಮೀಟರ್ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ ಅದೇ ರೀತಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಮೀನ 5000 ಓಟದಲ್ಲಿ ಪ್ರಥಮ ಸ್ಥಾನ, ಹಾಗೂ 3000 ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
5000 ನಡಿಗೆಯಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರವೀಣ್ ಕುಮಾರ್ ಪ್ರಥಮ ಸ್ಥಾನ ಹಾಗೂ ರಿಲೇ ಓಟದಲ್ಲಿ 400*100 ಪ್ರಥಮ ಸ್ಥಾನ ವಿದ್ಯಾರ್ಥಿಗಳಾದ ಭರತ್, ಅಮೀನ್ ,ರಾಕೇಶ್ ,ಬೆಳ್ಳಿರಾಯ ಪ್ರಥಮ ಸ್ಥಾನ ಪಡೆದಿದ್ದಾರೆ.
ಎಲ್ಲ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದ ಪ್ರಯುಕ್ತ. ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಸಾಧನೆಯನ್ನು ಮೆಚ್ಚಿ ಸನ್ಮಾನಿಸಿ ಅಭಿನಂದಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಸುಜಾತಾ ಬಿರಾದರ್, ಕ್ರೀಡಾ ಕಾರ್ಯದರ್ಶಿ ಬಲರಾಮ್ ಚೌಹಾಣ್, ತರಬೇತುದಾರ ಮಲ್ಲಯ್ಯ ಮಠಪತಿ, ಹಿರಿಯ ಉಪನ್ಯಾಸಕರಾದ ಚಂದ್ರಕಾಂತ್ ಸನದಿ ಸೇರಿದಂತೆ ಹಲವು ಉಪನ್ಯಾಸಕರು ಉಪಸ್ಥಿತರಿದ್ದರು.