ರಾಜ್ಯಪಾಲರ ಧೋರಣೆ ಖಂಡಿಸಿ ಪ್ರತಿಭಟನೆ
ರಾಯಚೂರು,ಆ.೨೫ – ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಧೋರಣೆ ಖಂಡಿಸಿ ಆಗಸ್ಟ್ ೨೭ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಿಂದ ರಾಜಭವನ ಚಲೋ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಕನಕದಾಸ ಉದ್ಯಾನವನ ಸಮಿತಿಯ ಅಧ್ಯಕ್ಷ
ಕೆ.ಆಂಜನೇಯ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಪ್ಪು ಚುಕ್ಕೆ ಆಗಬೇಕೆಂದು ಬಿಜೆಪಿ,ಜೆಡಿಎಸ್ ನಾಯಕರು ಮಾಡುತ್ತಿರುವ ಷಡ್ಯಂತರ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನೇಕ ವರ್ಷಗಳಿಂದ ಅವರಿಗೆ ಕಪ್ಪು ಚುಕ್ಕೆ ತರುವ ಷಡ್ಯಂತರ ನಡೆಯುತ್ತಾ ಬಂದಿದೆ. ಎಲ್ಲಾ ಜಾತಿ ಜನಾಂಗದವರ ಜೊತೆ ಸಿಎಂ ಸಿದ್ದರಾಮಯ್ಯ ಅವರು ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ ಅಂಥವರ ವಿರುದ್ಧ ಬಿಜೆಪಿ , ಜೆಡಿಎಸ್ ಮೈತ್ರಿ ನಾಯಕರು ರಾಜ್ಯಪಾಲರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ರೀತಿ ತೊಂದರೆಗಳನ್ನು ನೀಡುತ್ತಿರುವುದು ಖಂಡನೀಯ ಅಂದು ನಡೆಯುವ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಎಲ್ಲ ಸಮಾಜದ ಮುಖಂಡರು ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬೂದೆಪ್ಪ ಇದ್ದರು.