ಶಾಸಕ ಲಕ್ಷ್ಮಣ ಸವದಿ ಅವರ ಸತತ ಪ್ರಯತ್ನ ಅಥಣಿಗೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು
ಅಥಣಿ :ಆ.25: ಮತಕ್ಷೇತ್ರದ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ವರ್ಗದ ಕುಟುಂಬಗಳು ಹೆಚ್ಚಾಗಿ ವಾಸಿಸುತ್ತಿದ್ದು ಆ ಸಮುದಾಯದ ಜನರು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುತ್ತಾರೆ. ಅದಕ್ಕಾಗಿ ಅಥಣಿ ಕ್ಷೇತ್ರದಲ್ಲಿ “6 ನೇ ತರಗತಿಯಿಂದ 10 ನೇ ತರಗತಿವರೆಗೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು ಮಾಡಲು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮನವಿ ಮಾಡಿಕೊಂಡಿದ್ದರು ಶಾಸಕ ಲಕ್ಷ್ಮಣ ಸವದಿ ಅವರ ಮನವಿಗೆ ಸ್ಪಂದಿಸಿದ ಸಚಿವರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಿಸಲು 2024-25 ಸಾಲಿನ ಆಯವ್ಯಯದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿತ್ತು ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರ ಶಾಲೆಯನ್ನು ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.
ಶಾಸಕ ಲಕ್ಷ್ಮಣ ಸವದಿ ಸಂತಸ ಸಿಎಂ. ಡಿಸಿಎಂ. ಸಚಿವರಿಗೆ ಧನ್ಯವಾದಗಳು :
ಅಥಣಿ ಮತಕ್ಷೇತ್ರಕ್ಕೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವ ದೃಷ್ಟಿಯಿಂದ “6 ರಿಂದ 10 ನೇ ತರಗತಿ ವರೆಗಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ” ಯನ್ನು ಮಂಜೂರು ಮಾಡಿ ಅನುಮೋದನೆ ನೀಡಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರಿಗೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವರಾದ ಜಮೀರ ಅಹ್ಮದ ಖಾನ ಇವರಿಗೆ ವೈಯಕ್ತಿಕವಾಗಿ ಹಾಗೂ ಅಥಣಿ ಮತಕ್ಷೇತ್ರದ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕ
ಧನ್ಯವಾದಗಳನ್ನ ಅರ್ಪಿಸಿದರು.
ಶಾಸಕ ಲಕ್ಷ್ಮಣ ಸವದಿ ಅವರಿಗೆ ಧನ್ಯವಾದ ಸಲ್ಲಿಸಿದ ಅಲ್ಪಸಂಖ್ಯಾತ ಸಮುದಾಯ : ಸಮಾಜದ ಪ್ರತಿಯೊಂದು ಮಗುವಿಗೂ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ಅಲ್ಪಸಂಖ್ಯಾತರ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಶಾಸಕ ಲಕ್ಷ್ಮಣ ಸವದಿ ಅವರು ಹೆಚ್ಚಿನ ಒಲವು ನೀಡಿದ್ದು ಅದನ್ನು ಸಮುದಾಯದ ಮಕ್ಕಳು ಸದುಪಯೋಗ ಪಡೆದುಕೊಂಡು ಉನ್ನತ ಶಿಕ್ಷಣ ಪಡೆಯಬೇಕು. ಈ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಶಾಸಕ ಲಕ್ಷ್ಮಣ ಸವದಿ ಅವರಿಗೆ ಅಲ್ಪಸಂಖ್ಯಾತರ ಸಮುದಾಯದವರು ಧನ್ಯವಾದ ತಿಳಿಸಿದ್ದಾರೆ.