ನೂತನ ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಡಿ. ಅವರಿಗೆ ಸತ್ಕಾರ
ಕಲಬುರಗಿ:ಆ.25: ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಗ್ರಾಮದವರಾದ ನಗರ ನೂತನ ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಡಿ. ಅವರಿಗೆ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶನಿವಾರ ಸತ್ಕರಿಸಿ, ಶುಭಾಷಯ ಕೋರಲಾಯಿತು.
ಅಭಿನಂದಿಸಿ ಮಾತನಾಡಿದ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ ಗುಂಜ ಬಬಲಾದ, ತಾವು ಕಲಬುರಗಿಯ ಪೊಲೀಸ್ ಕಮಿಷನರ್ ಆಗಿ ಆಗಮಿಸಿದ್ದು, ನಮ್ಮ ಆಳಂದ ತಾಲೂಕು ಹಾಗೂ ಜಿಲ್ಲೆಯ ಸಮಸ್ತ ಜನತೆಗೆ ತುಂಬಾ ಹರ್ಷವಾಗಿದೆ. ತಮ್ಮ ಅಧಿಕಾರದಲ್ಲಿ ಇಲಾಖೆಯ ಕೀರ್ತಿಯ ಜೊತೆ ಜಿಲ್ಲೆಯ ಕೀರ್ತಿ ಹೆಚ್ಚಾಗುತ್ತದೆ. ಜಿಲ್ಲೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ತಾವು ಮಾರ್ಗದರ್ಶನ ನೀಡುವ ಮೂಲಕ ನಮ್ಮ ಜಿಲ್ಲೆಯಿಂದ ಐಎಎಸ್, ಐಪಿಎಸ್ ಅಧಿಕಾರಿಗಳು ಹೊರಹೊಮ್ಮಲಿ. ಅದಕ್ಕೆ ನಮ್ಮ ಬಳಗ ವೇದಿಕೆ ಒದಗಿಸಿಕೊಡುತ್ತದೆ ಎಂದರು.
ಬಳಗದ ಉಪಾಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ, ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ, ಮುಖ್ಯ ಶಿಕ್ಷಕ ದೇವೇಂದ್ರಪ್ಪ ಗಣಮುಖಿ, ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್.ಬಿರಾದಾರ, ಸಹಾಯಕ ಪಿಎಫ್ ಅದಿಕಾರಿ ಬಸವರಾಜ ಹೆಳವರ ಯಾಳಗಿ ಸೇರಿದಂತೆ ಇನ್ನಿತರರಿದ್ದರು.