ಹಳ್ಳಿಖೇಡ (ಕೆ) ಸರಕಾರಿ ಪ್ರೌಢ ಶಾಲೆ ವಿಶೇಷತೆ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ
ಹುಮನಾಬಾದ್:ಆ.25: ಸದಾ ಹಚ್ಚು ಹಸಿರಿನಿಂದ ಕಂಗೊಳಿಸುತ್ತಿರುವ ತಾಲೂಕಿನ ಹಳ್ಳಿಖೇಡ (ಕೆ) ಗ್ರಾಮದ ಸರಕಾರಿ ಪ್ರೌಢ ಶಾಲೆ ಪರಿಸರ ಸಂರಕ್ಷಣೆಗೆ ವಿಶೇಷ ಕಾಳಜಿ ವಹಿಸಿ ಮಕ್ಕಳಲ್ಲಿ ಪರಿಸರ ಪ್ರೇಮ ಮೂಡಿಸುತ್ತಿದೆ.
ಸರಕಾರಿ ಶಾಲೆಗಳು ಎಂದರೆ ಇಂದಿನ ಕಾಲದಲ್ಲಿ ಮೂಗು ಮುರಿಯುವವರ ಸಂಖ್ಯೆಯೇ ಹೆಚ್ಚು. ಈ ಎಲ್ಲದರ ನಡುವೆ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿ ಅವಶ್ಯವಿರುವ ಎಲ್ಲ ಸೌಲಭ್ಯಗಳನ್ನು ಎಲ್ಲ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಒದಗಿಸುವ ಮೂಲಕ ಇಲ್ಲಿನ ಶಿಕ್ಷಕರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ.
ಮಕ್ಕಳಲ್ಲಿನ ಪ್ರತಿಭೆ ಗುರುತಿಸಲು ಶಾಲೆಯಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಕ್ರೀಡೆ, ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಶಿಕ್ಷಕರು ಆವರಣದಲ್ಲಿ ಕೈ ತೋಟ ನಿರ್ಮಿಸಿ ಅಂದವನ್ನು ಹೆಚ್ಚಿಸಿದ್ದಾರೆ. ಜೊತೆಗೆ ಶಾಲೆಯ ಆವರಣದ ತುಂಬೆಲ್ಲ ಗಿಡ ಮರಗಳ ಸಸಿ ನೆಟ್ಟು ಮಕ್ಕಳಲ್ಲಿ ಪರಿಸರದ ಕಾಳಜಿ ಮನೋಭಾನೆಗಳನ್ನು ಮಕ್ಕಳ ಮನಸ್ಸಿನಲ್ಲಿ ತುಂಬುವ ಕಾರ್ಯ ಇಲ್ಲಿನ ಶಿಕ್ಷಕ ವೃಂದದವರು ಮಾಡುತ್ತಿದ್ದಾರೆ.
ಶಾಲೆಯಲ್ಲಿ ತರಗತಿವಾರು ತೆಗೆದುಕೊಂಡು ನೋಡಿದಾಗ 8ನೇ 35, 9ನೇ 105 ಹಾಗೂ 10ನೇ 111 ಸೇರಿ ಎಲ್ಲ ತರಗತಿಯಲ್ಲಿ 251 ವ್ಯಾಸಂಗ ಮಾಡುತ್ತಿದ್ದಾರೆ. ಜಿಲ್ಲೆಯ ಚಿಟಗುಪ್ಪ ಹಾಗೂ ಬಸವಕಲ್ಯಾಣ ತಾಲ್ಲೂಕು ಸೇರಿ ಕಲಬುರಗಿ ಜಿಲ್ಲೆಯ ವಿವಿಧ ಗ್ರಾಮಗಳ ಮಕ್ಕಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವುದು ವಿಶೇಷವಾಗಿದೆ.
………………………………
ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವುದರ ಜೊತೆಗೆ ಮಕ್ಕಳಲ್ಲಿ ಪರಿಸರ ಸಂರಕ್ಷಣೆಗೆ ಪೂರಕವಾದ ಅಂಶಗಳನ್ನು ತಿಳಿ ಹೇಳಲಾಗುತ್ತಿದೆ. ಪರಿಸರ ಸಂರಕ್ಷಣೆ ಜೊತೆಗೆ ಮಕ್ಕಳ ಶೈಕ್ಷಣಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಸಂಗಮ್ಮ ಸಿ. ಬಮ್ಮಣಿ
ಮುಖ್ಯಶಿಕ್ಷಕಿ, ಸರಕಾರಿ ಪ್ರೌಢ ಶಾಲೆ ಹಳ್ಳಿಖೇಡ (ಕೆ)