ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಅಫಜಲಪುರ: ಆ.25:ಪಟ್ಟಣದ ಮಾತೋಶ್ರೀ ಮನೋರಮಾ ಮಧ್ವರಾಜ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ವಲಯ ಮಟ್ಟದ ವಾಲಿಬಾಲ್ ಕ್ರೀಡಾಕೂಟ ಪಂದ್ಯದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯಗುರು ಬಸವರಾಜ ನಿಂಬರಗಿ ತಿಳಿಸಿದ್ದಾರೆ.
ಮಕ್ಕಳ ಸಾಧನೆಗೆ ಶಾಲೆಯ ಅಧ್ಯಕ್ಷರು, ಆಡಳಿತ ಮಂಡಳಿ, ಸರ್ವ ಸದಸ್ಯರು, ಶಿಕ್ಷಕ ಸಿಬ್ಬಂದಿ ಹಾಗೂ ದೈಹಿಕ ಶಿಕ್ಷಕ ಎಸ್.ಎಂ ಕರಿಕಲ್ ಸಂತಸ ವ್ಯಕ್ತಪಡಿಸಿದ್ದಾರೆ.