ಜಾಲಿಗೆ ಗ್ರಾ.ಪಂಗೆ ಆಯುಕ್ತ ಭೇಟಿ: ಪ್ರಗತಿ ವಿಕ್ಷಣೆ
ದೇವನಹಳ್ಳಿ.ಆ.೨೫-ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಪಂಚಾಯತ್ ರಾಜ್ ಆಯುಕ್ತರಾದ ಅರುಂಧತಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ೧೬ ನೇ ಹಣಕಾಸು ಆಯೋಗದ ತಂಡದೊಂದಿಗೆ ಭೇಟಿ ನೀಡಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಂಥಾಲಯ, ಶಿಶುಪಾಲನ ಕೇಂದ್ರ, ಅಂಗನವಾಡಿ ಕೇಂದ್ರಗಳು, ಎಸ್.ಡಬ್ಯ್ಲೂ.ಎಮ್ ಘಟಕಗಳಿಗೆ ತೆರಳಿ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿಗಳಾದ ಟಿ.ಕೆ ರಮೇಶ್, ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀನಾಥಗೌಡ, ವಲಯ ಅರಣ್ಯ ಅಧಿಕಾರಿಗಳಾದ ಗೀತಾ, ಗ್ರಾ.ಪಂ ಅಧ್ಯಕ್ಷರಾದ ಆನಂದಕುಮಾರ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ ಹೆಚ್ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.