ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಚಿಕ್ಕನಾಯಕನಹಳ್ಳಿ, ಆ. ೨೫- ಶೆಟ್ಟಿಕೆರೆ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹೆಸರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಪ್ರಶಸ್ತಿ ಪಡೆದಿದ್ದಾರೆ.
ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದಲ್ಲಿ ಥ್ರೋ ಬಾಲ್‌ನಲ್ಲಿ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಥಮ, ವಾಲಿಬಾಲ್‌ನಲ್ಲಿ ದ್ವಿತೀಯ, ೧೦೦ ಮೀ ಓಟದಲ್ಲಿ ಪ್ರಥಮ, ಎತ್ತರ ಜಿಗಿತದಲ್ಲಿ ದ್ವಿತೀಯ, ೪೦೦ ಮೀ ಓಟದಲ್ಲಿ ಪ್ರಥಮ ಹಾಗೂ ಬಾಲಕಿಯರ ವಿಭಾಗದ ವಾಲಿಬಾಲ್‌ನಲ್ಲಿ ಪ್ರಥಮ, ಷಟಲ್ ಬ್ಯಾಡ್ಮಿಟಂನಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ದ್ವಿತೀಯ, ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಗಂಗಾಧರಯ್ಯ, ಶಿಕ್ಷಕರಾದ ಸ್ವಾಮಿ, ಜಯಣ್ಣ, ಮಮತಾ, ಸೌಮ್ಯ ಮತ್ತಿತರರು ಉಪಸ್ಥಿತರಿದ್ದರು.