ಶಿಕ್ಷಣದಿಂದ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯ: ಎಚ್.ಸಿ. ಮಹದೇವಪ್ಪ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.25-ಶಿಕ್ಷಣದಿಂದ ಮಾತ್ರ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂಬ ಅರಿವು ಅಂಬೇಡ್ಕರ್ ಅವರಿಗೆ ಇತ್ತು. ಆಗಾಗಿ ಅವರು ಶಿಕ್ಷಣವನ್ನು ಮೂಲಭೂತ ಹಕ್ಕು ಆಗಿ ಸಂವಿಧಾನದಲ್ಲಿ ಅಳವಡಿಸಿದರು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಎಚ್.ಸಿ. ಮಹದೇವಪ್ಪ ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ವತಿಯಿಂದ 2023-24ನೇ ಸಾಲಿನ ಎಸ್‍ಎಲ್‍ಸಿ/ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಮತ್ತು ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಶಿಕ್ಷಕರ ನೌಕರರ ಜಾಗೃತಿ ಸಮಾವೇಶ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನ ದತ್ತವಾಗಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ ಪರಿಣಾಮ ಎಲ್ಲರು ಸುಶಿಕ್ಷಿತರವಾಗಿ ಉತ್ತಮ ಸಮಾಜವನ್ನು ಕಾಣಲು ಸಾಧ್ಯವಾಗಿದೆ. ಈ ಹಿಂದೆ ಶಿಕ್ಷಣ ಒಂದು ವರ್ಗದ ಸ್ವತ್ತು ಆಗಿತ್ತು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ, ಎಲ್ಲರಿಗೂ ಶಿಕ್ಷಣ, ಉದ್ಯೋಗ ಹಾಗೂ ಸಮಾನತೆಯನ್ನು ಕಲ್ಪಿಸಿಕೊಟ್ಟರು. ಧರ್ಮಾಧಾರಿತ ಶಿಕ್ಷಣ ಬೇಡ ಎಂದು ಹೇಳಿದರು. ಇದರ ಪರಿಣಾಮ ಚಾಮರಾಜನಗರದÀಂತಹ ಹಿಂದುಳಿದ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿಯಾಗಿದೆ. ಮೂರು ಸಾವಿರ ಶಿಕ್ಷಕರು ನೊಂದಣಿ ಮಾಡಿದ್ದೀರಿ. ಇಡೀ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿಗೆ ನಾಂದಿಯಾಗಿದೆ. ನೀವೆಲ್ಲರೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಪ್ರಬುದ್ದ ಭಾರತ ಪ್ರಜೆಗಳಾನ್ನಾಗಿ ರೂಪಿಸಬೇಕು. ಇದರಿಂದ ದೇಶ ಮತ್ತು ರಾಷ್ಟ್ರ ಅಭಿವೃದ್ದಿಯತ್ತ ಸಾಗುತ್ತದೆ ಎಂದರು.
ಅಂಬೇಡ್ಕರ್ ಒಬ್ಬ ಶಿಕ್ಷಕರಾಗಿದ್ದರು. ಕಾನೂನು ಕಾಲೇಜು ಪ್ರಾಧ್ಯಾಪಕರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಅವರು ಪಟ್ಟ ಕಷ್ಟವನ್ನು ನಾವುಗಳೂ ಯಾರು ಅನುಭವಿಸಿಲ್ಲ. ಹೀಗಾಗಿ ತಾವೆಲ್ಲರು ಜಾಗೃತಿ ರಾಗಬೇಕು. ಅವರ ಅಶಯದಂತೆ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಬೇಕು. ನೂತನ ಶಿಕ್ಷಣ ನೀತಿಯು ಮನುವಾದಿ ಶಿಕ್ಷಣಕ್ಕೆ ಮತ್ತೇ ವಾಪಸ್ ಹೋದಂತೆ ಆಗುತ್ತದೆ. ಬಡ ಮಕ್ಕಳು ನಾಲ್ಕು ವರ್ಷ ಪದವಿ ಮಾಡುವುದು ಕಷ್ಟ. ದರಿಂದ ಶಿಕ್ಷಣ ಮೌಲ್ಯ ಕುಸಿಯುತ್ತದೆ. ಮೂರು ವರ್ಷಗಳ ಪದವಿ ಪೂರ್ಣ ಮಾಡಿ ಅವರು ನಿರುದ್ಯೋಗಿಗಳಾಗುತ್ತಾರೆ. ಹೀಗಾಗಿ ನಮ್ಮ ಸರ್ಕಾರ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸದೇ ಹಿಂದಿನ ಶಿಕ್ಷಣ ನೀತಿಯನ್ನು ಮುಂದುವರಿಸುತ್ತಿದೆ ಎಂದರು.
ಕೊಳ್ಳೇಗಾಲ ಶಾಸಕ ಎ.ಅರ್.ಕೃಷ್ಣಮೂರ್ತಿ ಮಾತನಾಡಿ, ಶಿಕ್ಷಣಕ್ಕೆ ಪರಿಶಿಷ್ಟ ಜಾತಿ ಜನಾಂಗವು ಹೆಚ್ಚಿನ ಒತ್ತು ನೀಡಿದೆ. ಅಂಬೇಡ್ಕರ್ ಅವರ ಆಶಯದಂತೆ ಚಾಮರಾಜನಗರ ಜಿಲ್ಲೆಯಲ್ಲಿ ನಮ್ಮ ತಂದೆ ಬಿ.ರಾಚಯ್ಯ ಅವರು ಶಿಕ್ಷಕರ ತರಬೇತಿ ಸಂಸ್ಥೆಯನ್ನು ಆರಂಭಿಸಿ, ಶಿಕ್ಷಕರನ್ನು ತಯಾರು ಮಾಡಿದರು. ಆದೇ ರೀತಿ ಕೆ.ಸಿ. ರಂಗಯ್ಯ ಅವರು ಬಹಳಷ್ಟು ಬಡ ಮಕ್ಕಳಿಗೆ ಶಿಕ್ಷಣವನ್ನು ಧಾರೆ ಎರೆದಿದ್ದಾರೆ. ಜಿಲ್ಲೆಯಲ್ಲಿ ಅವರ ರಾಮಚಂದ್ರ ಟಿಸಿಎಚ್ ಕಾಲೇಜಿನಲ್ಲಿ ಪ್ರಶಿಕ್ಷಣ ಪಡೆದು ಉದ್ಯೋಗ ಪಡೆದು ಶಿಕ್ಷಕರಾಗಿ ವೃತ್ತಿಯಲ್ಲಿರುವ ಸಾಕಷ್ಟು ಮಂದಿ ಇದ್ದಾರೆ. ನೀವೆಲ್ಲರು ಸಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ವನ್ನು ನೀಡಿ, ಜಿಲ್ಲೆಯಲ್ಲಿ ಶೈಕ್ಷಣಿಕ ಅಭಿವೃದ್ದಿಗೆ ಹೆಚ್ಚಿನ ಅಧ್ಯತೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ನಳಂದ ಬೌದ್ಧ ವಿಶ್ವವಿದ್ಯಾಲಯದ ಪ್ರಧಾನ ಕಾರ್ಯದರ್ಶಿ ಭಂತೇ ಬೋದಿದತ್ತ ದಿವ್ಯ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಮಂಜುನಾಥ್ ಪ್ರಸನ್ನ, ಬಿಇಓ ಹನುಮಂತಶೆಟ್ಟಿ, ಪೌರಾಯುಕ್ತ ರಾಮದಾಸ್, ಡಾ.ರೇಣುಕಾದೇವಿ, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಬಿಂದ್ಯಾ, ನಗರಸಭಾ ಸದಸ್ಯ ಆರ್.ಎಂ.ರಾಜಪ್ಪ, ಬಿಆರ್‍ಸಿ ಸರೋಜ, ಕೆಆರ್‍ಡಿಎಲ್ ಅಭಿಯಂತರÀ ಚಿಕ್ಕಲಿಂಗಯ್ಯ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ಹೆಚ್.ಕೆ.ಯೋಗನಂದ, ಡಯಟ್ ಪ್ರಾಂಶುಪಾಲ ಕಾಶೀನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರ ಅರಸ್, ನಿವೃತ್ತಿ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ, ಸಂಘದ ಜಿಲ್ಲಾಧ್ಯಕ್ಷ ಸಿ.ಕೆ.ರಾಮಸ್ವಾಮಿ ಸ್ವಾಗತ ಭಾಷಣ ಮಾಡಿದರು. ಜಿಲ್ಲಾ ಕಾರ್ಯದರ್ಶಿ ನಂಜುಂಡಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ತಾಲೂಕು ದೈಹಿಕ ಅಧೀಕ್ಷಕ ಬಸವರಾಜು, ಕರಾಪ್ರಾಶಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಕೊಳ್ಳೇಗಾಲ ತಾಲ್ಲೂಕು ಅಧ್ಯಕ್ಷ ಶ್ರೀಧರ್,ಕಾರ್ಯದರ್ಶಿ ಚಿಕ್ಕರಾಜು, ಪರಿಶಿಷ್ಟ ಜಾತಿ ಶಿಕ್ಷಕರ ಕ್ಷೇಮಾಭಿವೃದ್ದಿ ಸಂಘದ ತಾಲೂಕು ಅಧ್ಯಕ್ಷ ಎಂ.ಡಿ.ಮಹದೇವಯ್ಯ, ಕೊಳ್ಳೇಗಾಲ ತಾಲ್ಲೂಕು ಅಧ್ಯಕ್ಷ ಆನಂದರಾಜು, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಎಸ್.ಜಯರಾಮು, ಯಳಂದೂರು ತಾಲ್ಲೂಕು ಅಧ್ಯಕ್ಷ ಶಂಕರ್, ಹನೂರು ತಾಲೂಕು ಅಧ್ಯಕ್ಷ ಮಾದೇಶ್ ಮೊದಲಾದವರು ಇದ್ದರು.