ಗಾಂಧೀಜಿ,ಶಾಸ್ತ್ರೀ ಜಯಂತಿ ಆಚರಣೆ
ಜೇವರ್ಗಿ :ಅ.2:ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದ ಸಹಯೋಗದೊಂದಿಗೆ ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಮತ್ತು ದೇಶ ಕಂಡ ಅಪ್ರತಿಮ ಪ್ರಧಾನ ಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ 120ನೇ ಜಯಂತಿಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ರವೀಂದ್ರಕುಮಾರ ಸಿ. ಬಟಗೇರಿ, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ, ಉಪನ್ಯಾಸಕರಾದ ಮಲ್ಲಿಕಾರ್ಜುನ ದೊಡ್ಡಮನಿ, ಸುವರ್ಣಲತಾ ಭಂಡಾರಿ, ಮಲ್ಲಪ್ಪ ರಂಜಣಗಿ, ದುಂಡಪ್ಪ ಯರಗೋಳ್, ಗ್ರಂಥಪಾಲಕ ಲಿಂಗರಾಜ ಹಿರೇಗೌಡ, ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ಬಾಬುರಾವ ಶೇರಿಕಾರ, ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ, ಸಂಘಟನಾ ಕಾರ್ಯದರ್ಶಿ ಸಾಯಬಣ್ಣ ಹೋಳ್ಕರ್, ಹಿರಿಯ ಪತ್ರಕರ್ತ ರಾಜೇಂದ್ರ ಎಸ್.ಪಾಟೀಲ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.