ಸೇವೆಯನ್ನು ಖಾಯಂ ಮಾಡುವಂತೆ ಆಗ್ರಹ ಜಿಲ್ಲೆಯ ಕೊರೋನಾ ವರಿಯರ್ಸಗಳಿಂದ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ
ಬೀದರ್:ಆ.24:ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್‍ಎಚ್‍ಎಂ ಒಳಗುತ್ತಿಗೆ ನೌಕರರು ತಮ್ಮ ಸೇವೆಯನ್ನು ಖಾಯಂ ಮಾಡುವಂತೆ ಆಗ್ರಹಿಸಿ ಕಪ್ಪುಪಟ್ಟಿ ಧರಿಸುವ ಮೂಲಕ ಕಾರ್ಯ ನಿರ್ವಹಿಸುವ ಮೂಲಕ ಸರ್ಕಾರದ ಗಮನ ಸೆಳೆಯುತಿದ್ದಾರೆ.
ನುಡಿದಂತೆ ನಡೆಯುವ ಸರ್ಕಾರ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಒಳ ಗುತ್ತಿಗೆ ನೌಕರರನ್ನು ಖಾಯಂ ಮಾಡಬೇಕು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಖಾಯಂ ಗೊಳಿಸುವ ಭರವಸೆ ನೀಡಿತ್ತು. ಒಂದು ವರ್ಷ ಕಳೆದರೂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್ ಎಚ್‍ಎಂ ಒಳಗುತ್ತಿಗೆ ನೌಕರರನ್ನು ಖಾಯಂ ಗೊಳಿಸಿಲ್ಲ ಎಂದು ನೌಕರರು ಆರೋಪಿಸಿದ್ದಾರೆ.
ಸುಮಾರು 20 ವರ್ಷಗಳಿಂದ ಕೆಲ ವೈದ್ಯರು, ಫರ್ಮಾಲಸಿಸ್ಟ್ ಪ್ರಯೋಗಾಲಯ ಸಿಬ್ಬಂದಿ, ಆಪ್ತ ಸಮಾಲೋಚಕರು, ಶುಶ್ರೂಷಕರು, ಕ್ಷಯರೋಗ ವಿಭಾಗದ ಪೂಜ್ಯರ ಸಿಬ್ಬಂದಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲ ರಾಷ್ಟ್ರೀಯ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಲ್ಲಿ ಮತ್ತು ಕೋವಿಡ್-19 ರಂತಹ ಮಹಾಮಾರಿ ಸಂದರ್ಭದಲ್ಲಿಯೂ ಶ್ರಮಿಸಿದ್ದೇವೆ. ಸರ್ಕಾರ ಜಾರಿಗೆ ತಂದ ಆರೋಗ್ಯ ಇಲಾಖೆಯ ಹಲವಾರು ಯೋಜನೆಗಳನ್ನು ಜನರ ಬಳಿಗೆ ತಲುಪಿಸಿದ್ದೇವೆ ಎಂದು ಹೇಳಿದ್ದಾರೆ.
ಬಿಜೆಪಿ ಆಡಳಿತದಲ್ಲಿ ಫ್ರೀಡಂ ಪಾರ್ಕನಲ್ಲಿ ಧರಣಿ ಕುಳಿತಾಗ ಇಂದಿನ ಡಿಸಿಎಂ ಡಿ.ಕೆ.ಶಿವಕುಮಾರ ಅವರು ನಮ್ಮ ಬೇಡಿಕೆಗೆ ಸ್ಪಂದಿಸಿ ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 28 ಸಾವಿರ ಸಿಬ್ಬಂದಿಗೆ ಖಾಯಂಗೊಳಿಸುವ ಭರವಸೆ ನೀಡಿದ್ದರು. ಆದರೆ, ಒಂದು ವರ್ಷ ಕಳೆದರೂ ನಮ್ಮ ಬೇಡಿಕೆ ಈಡೇರಿಸಿಲ್ಲ ಎಂದು ಸಮುದಾಯ ಆರೋಗ್ಯ ಅಧಿಕಾರಿ ಕೃಪಾ, ಡಾ. ಹೆಚ್ ನೌಬಾದೆ, ಡಾ. ವೈಶಾಲಿ ಸಾವಗಾಂವಕರ ಹಾಗೂ ಸಮುದಾಯ ಆರೋಗ್ಯ ಅಧಿಕಾರಿ ರಾಚಣ್ಣ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.