ಶೈಕ್ಷಣಿಕ ಬದಲಾವಣೆಯಲ್ಲಿ ಶಿಕ್ಷಕರ ಪಾತ್ರ ಮುಖ್ಯ
ಧಾರವಾಡ,ಆ.24:ಸಮಗ್ರವಾದ ಶೈಕ್ಷಣಿಕ ಬದಲಾವಣೆ ಮತ್ತು ಪ್ರತಿ ಶಾಲೆ ಪ್ರಸಕ್ತ ವರ್ಷ ಸಂಪೂರ್ಣ ಫಲಿತಾಂಶ ಪಡೆಯುವಲ್ಲಿ ಶಾಲೆಯ ವಿದ್ಯಾರ್ಥಿ, ಶಿಕ್ಷಕ ಮತ್ತು ಪಾಲಕರ ಪಾತ್ರ ಮುಖ್ಯವಾಗಿದೆ. ಇದನ್ನು ಸಂಯೋಜಿಸಿ, ಗುರಿ ಸಾಧಿಸುವಲ್ಲಿ ಶಾಲೆಯ ಹೆಡ್ ಮಾಸ್ಟರ್ ಜವಾಬ್ದಾರಿ ಮಹತ್ವದ್ದಾಗಿದ್ದು, ಶಾಲೆಯನ್ನು ಪಕ್ಕಾ ಲೀಡ್ ಮಾಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಪ್ರೌಢಶಾಲಾ ಶಿಕ್ಷಕರ ಸಂಘಗಳ ಜಿಲ್ಲಾ ಪ್ರತಿನಿಧಿಗಳ ಸಭೆ ಉದ್ದೇಶಿಸಿ, ಮಾತನಾಡಿದರು.
ಶೈಕ್ಷಣಿಕ ಬದಲಾವಣೆಯಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಇದರಲ್ಲಿ ಪಾಲಕರ ಸಹಕಾರವೂ ಅಗತ್ಯವಿದೆ. ವಿದ್ಯಾರ್ಥಿಗಳು, ಪಾಲಕರು ಮತ್ತು ಶಿಕ್ಷಕರನ್ನು ಸರಿಯಾಗಿ ಸಂಯೋಜಿಸಿ, ಅವರನ್ನು ಪರಸ್ಪರ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ಮಾಡಬೇಕು. ಇದನ್ನು ಆಯಾ ಪ್ರೌಢಶಾಲಾ ಹೆಡ್ ಮಾಸ್ಟರ್ ಅವರ, ಮುಖ್ಯ ಶಿಕ್ಷಕರ ಜವಾಬ್ದಾರಿ ಬಹಳಷ್ಟಿದೆ ಎಂದು ಅವರು ಅಭಿಪ್ರಾಯ ಪಟ್ಟರು.
ಯಾವುದೇ ವಿದ್ಯಾರ್ಥಿಗೆ ವಿಶೇ?À ಕಾಳಜಿ ಅಗತ್ಯವಿದೆ ಎನಿಸಿದಲ್ಲಿ, ಶಾಲೆಯ ಮುಖ್ಯ ಶಿಕ್ಷಕರು ತಮಗೆ ಆ ಕುರಿತು ಶಿಪಾರಸ್ಸು ಮಾಡಿದರೆ ಅಗತ್ಯವಿರುವ ಶಿ?À್ಯವೇತನ, ಹಾಸ್ಟೆಲ್, ಪಠ್ಯಪುಸ್ತಕ ಮುಂತಾದವುಗಳನ್ನು ದೊರಕಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ವಿವಿಧ ಶಿಕ್ಷಣ ಸಂಘಟನೆಗಳ ಪದಾಧಿಕಾರಿಗಳು ಮಾತನಾಡಿ, ಶಿಕ್ಷಕರ ಕಾರ್ಯಬಾರ ಕಡಿಮೆಗೊಳಿಸುವ, ಸಿಲೇಬಸ್ ವಿಂಗಡನೆ ಮಾಡುವ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕಲಿಕೆಗೆ ವಿಶೇ?À ತಂತ್ರಗಳನ್ನು ಅಳವಡಿಸುವ ಬಗ್ಗೆ ತಮ್ಮ ಸಲಹೆ, ಅನುಭವಗಳನ್ನು ವ್ಯಕ್ತಪಡಿಸಿದರು. ಮಿ?Àನ್ ವಿದ್ಯಾಕಾಶಿ ಯಶಸ್ವಿಗೆ ಎಲ್ಲರೂ ಆತ್ಮಸಾಕ್ಷಿಯಿಂದ ಮತ್ತು ಪ್ರಾಮಾಣಿಕವಾಗಿ, ಶಿಕ್ಷಕ ಸಮೂಹ ಒಟ್ಟಾಗಿ, ಸಕ್ರಿಯವಾಗಿ ಭಾಗವಹಿಸುತ್ತಾರೆ ಎಂದು ಜಿಲ್ಲಾಡಳಿತಕ್ಕೆ ಭರವಸೆ ನೀಡಿದರು.
ಸಭೆಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳಾದ ಉಮೇಶ ಬೊಮ್ಮಕ್ಕನವರ, ಅಶೋಕ ಸಿಂದಗಿ, ರಾಮಕೃ?À್ಣ ಸದಲಗಿ, ಎಸ್.ಬಿ.ಮಲ್ನಾಡ, ಉಮಾದೇವಿ ಬಸಾಪುರ, ಮಹಾದೇವಿ ಮಾಡಲಗೇರಿ, ಡಿಡಿಪಿಐ ಕಚೇರಿಯ ಎಲ್ಲ ವಿ?Àಯಗಳ ಪರಿವಿಕ್ಷಕರು ಹಾಗೂ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಆರ್.ಭಟ್, ಸರಕಾರಿ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಅಸ್ಫಾಕ ಹಿರೇಕುಂಬಿ, ಸಹ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಜಿ.ಬಶೆಟ್ಟಿ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ವಿರೂಪಾಕ್ಷ ಹುದ್ದಾರ ಸೇರಿದಂತೆ ವಿವಿಧ ಪ್ರಮುಖರು ಮತ್ತು ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ, ಸರಕಾರಿ ಸಹ ಶಿಕ್ಷಕರ ಸಂಘ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘ, ರೂಪ್ಸಾ ಮತ್ತು ಕುಸಮ ಸಂಘಟನೆಗಳ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ, ತಮ್ಮ ಸಲಹೆ, ಅಭಿಪ್ರಾಯಗಳನ್ನು ಮಂಡಿಸಿದರು.