ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ
ಸಂಜೆವಾಣಿ ವಾರ್ತೆ
ಹಿರಿಯೂರು ಆ. ೨೪ –  ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆರಾಧನಾ ಮಹೋತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಲೋಕ  ಕಲ್ಯಾಣರ್ಥವಾಗಿ ಪೂಜೆ, ಪಂಚಾಮೃತ ಅಭಿಷೇಕ, ಪುಷ್ಪಾರ್ಚನೆ.  ಸಾಂಸ್ಕೃತಿಕ ಕಾರ್ಯಕ್ರಮ, ಗೀತೆ ಗಾಯನ, ಭಜನೆ ಏರ್ಪಡಿಸಲಾಗಿತ್ತು. ಬೃಂದಾವನ ಮಿತ್ರ ಕೂಟದ ಗೌರವಾಧ್ಯಕ್ಷರಾದ ರಾಮಚಂದ್ರ, ಅಧ್ಯಕ್ಷರಾದ ಎಚ್ಎಸ್ ನಾಗರಾಜು, ಕಾರ್ಯದರ್ಶಿ ವೆಂಕಟೇಶ್, ನಿರ್ದೇಶಕರಾದ ಪ್ರಕಾಶ್, ಹರೀಶ್ ಅರ್ಚಕರಾದ ಮಂಜುನಾಥ್ ಆಚಾರ್ಯ ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು