ರಾಜ್ಯದ ಸಣ್ಣ ಕೈಗಾರಿಕೆ ಸಚಿವರ ಪ್ರವಾಸ
ಕಲಬುರಗಿ:ಆ.23:ರಾಜ್ಯದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಇದೇ ಆಗಸ್ಟ್ 24 ರಿಂದ 26 ರವರೆಗೆ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಕೆಳಕಂಡ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಆಗಸ್ಟ್ 24 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಐವಾನ್ ಶಾಹಿ ಹೆಚ್.ಕೆ.ಇ. ಸೊಸೈಟಿಯ ಪಿಡಿಎ ಇಂಜನಿಯರಿಂಗ್ ಕಾಲೇಜಿನ ಅಡಿಟೋರಿಯಂದಲ್ಲಿ ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸಂಸ್ಥೆಗಳ ಸಮ್ಮೇಳನ ಹಾಗೂ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಆಗಸ್ಟ್ 25 ರಂದು ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಆಗಸ್ಟ್ 26 ರಂದು ಸೋಮವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಶಹಾಪೂರಕ್ಕೆ ಪ್ರಯಾಣಿಸಿ, ಶಹಾಪೂರದಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸಂಜೆ 6.30 ಗಂಟೆಗೆ ಮರಳಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.