ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ
ಕಲಬುರಗಿ:ಆ.23:-ರಾಜ್ಯದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಇದೇ ಆಗಸ್ಟ್ 24 ರಿಂದ 26 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಕೆಳಕಂಡ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಆಗಸ್ಟ್ 24 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಸೇಡಂ ಪಟ್ಟಣದಲ್ಲಿ ಹೊಸದಾಗಿ ನಿರ್ಮಿಸಲಾದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಟ್ಟಡ ಉದ್ಘಾಟನಾ ಸಮಾರಂಭ, ಬೆಳಿಗ್ಗೆ 11 ಗಂಟೆಗೆ ತಾಲೂಕು ಕ್ರೀಡಾಂಗಣ ಹತ್ತಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಇವುಗಳ ಸಹಯೋಗದೊಂದಿಗೆ 2021-22ನೇ ಸಾಲಿನ ವಿಶೇಷ ಆರ್.ಐ.ಡಿ.ಎಫ್. 27ನೇ ಕಂತಿನ ಪ್ರಾಯೋಜನೆಯಡಿ ಸೇಡಂ ಪಟ್ಟಣದಲ್ಲಿ ಮಂಜೂರಾದ ಸಮಗ್ರ ಕೃಷಿ ಪದ್ಧತಿಯ ಉತ್ಕøಷ್ಟ ಕೇಂದ್ರ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
ಅಂದು ಮಧ್ಯಾಹ್ನ 3.30 ಗಂಟೆಗೆ ಮಳಖೇಡದಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಸೇಡಂ ತಾಲೂಕಿನಲ್ಲಿ ಬರುವ ವಾಗ್ದರಿ-ರಿಬ್ಬನಪಲ್ಲಿ (ರಾ.ಹೆ.-10)ರಲ್ಲಿ ಮಳಖೇಡ ಗ್ರಾಮದ ಹತ್ತಿರದ ಕಾಗಿನಾ ನದಿಗೆ ಅಡ್ಡಲಾಗಿ ನೂತನವಾಗಿ ನಿರ್ಮಿಸಿದ ಸೇತುವೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಆಗಸ್ಟ್ 25 ಹಾಗೂ 26 ರಂದು ಕಲಬುರಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.