ಉನ್ನತ ಶಿಕ್ಷಣದಿಂದ ಉತ್ತಮ ಭವಿಷ್ಯ
ಶೈಕ್ಷಣಿಕ ವರ್ಷದ ಬಿಇ ವಿವಿಧ ವಿಭಾಗಗಳಲ್ಲಿ ಹೆಚ್ಚಿನ ಅಂಕಪಡೆದು ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಚಿವ ಡಾ.ಎಂ.ಸಿ.ಸುಧಾಕರ್ ಪದಕ ಮತ್ತು ಪ್ರಮಾಣ ಪತ್ರ ವಿತರಿಸಿದರು. ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದ ಅಧ್ಯಕ್ಷ ಡಿ.ಕೆ.ಮೋಹನ್ ಇತರರು ಇದ್ದರು.
ಕೆ.ಆರ್.ಪುರ,ಅ.೨- ಸ್ಪರ್ಧಾತ್ಮಕ ಜಗತ್ತಿನಲ್ಲಿ ಉನ್ನತ ಶಿಕ್ಷಣದ ಮೂಲಕ ನಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಹೇಳಿದರು. ಕೆ.ಆರ್.ಪುರದ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ೨೦೨೪-೨೫ನೇ ಸಾಲಿನ ಶೈಕ್ಷಣಿಕ ವರ್ಷದ ಬಿ.ಇ ತರಗತಿಯ ವಿವಿಧ ವಿಭಾಗಗಳ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಜಗತ್ತು ವಿಶಾಲಗೊಂಡಂತೆ ಅಧುನಿಕ ತಂತ್ರಜ್ಞಾನವೂ ಬೆಳೆಯುತ್ತಾ ಬರುತ್ತಿದೆ. ಮನುಷ್ಯನಿಗೆ ಬೇಕಾದ ಅವಶ್ಯಕತೆಗಳು ಹೆಚ್ಚಾಗುತ್ತಿವೆ. ಅವಶ್ಯಕತೆಗೆ ಅನುಗುಣವಾಗಿ ಉತ್ತಮ ಗುಣಮಟ್ಟದ ಶಿಕ್ಷಣವೊಂದೆ ವಿದ್ಯಾರ್ಥಿಗಳಿಗೆ ಮಾನದಂಡವಾಗಿದೆ ಎಂದರು.ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ತಾಂತ್ರಿಕ ಶಿಕ್ಷಣಕ್ಕೆ ಯಾವುದೇ ಕೊರತೆಯಿಲ್ಲ. ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆಗಳು ಬೆಂಗಳೂರಿನಲ್ಲಿವೆ. ಇದು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಸಾಧಿಸಲು ಸಹಾಯಕವಾಗಿದೆ ಎಂದು ಹೇಳಿದರು.
ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದ ಅಧ್ಯಕ್ಷ ಡಿ.ಕೆ.ಮೋಹನ್ ಅವರು ಮಾತನಾಡಿ, ವಿದ್ಯಾರ್ಥಿಗಳು ನಿಮ್ಮ ಬುದ್ಧಿ ಮತ್ತು ಪರಿಶ್ರಮ ನಿಮ್ಮ ಭವಿಷ್ಯವನ್ನು ರೂಪಿಸಬಲ್ಲದು ಆದ್ದರಿಂದ ಉತ್ತಮ ವಿದ್ಯಾಭ್ಯಾಸ ಮಾಡಿ ಎಂದು ಹೇಳಿದರು. ಈ ಸಂಧರ್ಭದಲ್ಲಿ ಸಂಸ್ಥೆಯ ಸಿಇಒ ನಿತಿನ್ ಮೋಹನ್, ಜಾಗತಿಕ ವಿಶ್ಲೇಷಕ ಆನಂದ್ ,ಪ್ರಾಂಶುಪಾಲರಾದ ಡಾ.ಜಿ.ಇಂದುಮತಿ ಇದ್ದರು.