ತಾಯಿ ಹೆಸರಲ್ಲಿ ಒಂದು ವೃಕ್ಷ ನೆಡಲು ಕರೆ
ಬ್ಯಾಡಗಿ,ಆ.23: ಅಮ್ಮನ ಹೆಸರಿನಲ್ಲಿ ಒಂದು ಮರವನ್ನು ನೆಡುವಂತೆ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಮನವಿಯು ಅತ್ಯಂತ ಸ್ಫೂರ್ತಿದಾಯಕ ವಿಷಯವಾಗಿದೆ. ಪ್ರತಿಯೊಬ್ಬರೂ ತಮ್ಮ ತಾಯಿಯ ಮೇಲಿನ ಪ್ರೀತಿಯನ್ನು ವೃಕ್ಷ ನೆಟ್ಟು ಅದನ್ನು ಪೆÇೀಷಿಸಿ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗುವಂತೆ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಮಲ್ಲಿಕಾರ್ಜುನ ಕರೆ ನೀಡಿದರು.
ತಾಲೂಕಿನ ಛತ್ರ ಗ್ರಾಮದ ವೀರಯ್ಯ ಲೋಕನಗೌಡ್ರ ಅವರ ಅಡಿಕೆ ತೋಟದಲ್ಲಿ ತಾಲೂಕು ಪಂಚಾಯತಿ ಮತ್ತು ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ತಾಯಿಯ ಹೆಸರಲ್ಲಿ ಒಂದು ವೃಕ್ಷ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಸುಸ್ಥಿರತೆಯಲ್ಲಿ ಎಲ್ಲರ ಪಾಲ್ಗೊಳ್ಳುವಿಕೆಯು ಬಹು ಅಗತ್ಯವಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು ತಾಯಿಯ
ಹೆಸರಿನಲ್ಲಿ ಒಂದು ವೃಕ್ಷ ನೆಡಲು ಮುಂದಾಗೋಣ ಎಂದು ತಿಳಿಸಿದರು.
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅಶೋಕ ಕುರುಬರ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಪ್ರತಿಯೊಂದೂ ಯೋಜನೆಯ ಫಲಾನುಭವಿಗಳು, ನಾಗರಿಕ ಸಮಾಜ ಸಂಸ್ಥೆಗಳು, ಸ್ವಸಹಾಯ ಸಂಘದವರು ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಪರಿಸರ ರಕ್ಷಣೆಗೆ ಕಂಕಣ ಬದ್ಧರಾಗಿರಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಪರಶುರಾಮ ಅಗಸನಹಳ್ಳಿ, ಸಹಾಯಕ ತೋಟಗಾರಿಕೆ ಅಧಿಕಾರಿ ಶಿವರಾಜ ಮುದಿಗೌಡ್ರ, ನರೇಗಾ ಐಇಸಿ ತಾಲೂಕಾ ಸಂಯೋಜಕ ಅಕ್ಷಯ ದೇಶಪಾಂಡೆ, ತಾಂತ್ರಿಕ ಸಹಾಯಕ ಶರಣಪ್ಪ ಅಣ್ಣಿಗೇರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
