ಕಾಂಗ್ರೆಸ್ ನಡೆ ಖಂಡಿಸಿ ಕೇಸರಿ ಪಾಳಯದಿಂದ ಪ್ರತಿಭಟನೆ
ಬೀದರ್:ಆ.22: ನಗರದ ಗಣೇಶ ಮೈದಾನದಲ್ಲಿ ಇಂದು ಕಾಂಗ್ರೆಸ್ ಪಕ್ಷವು ರಾಜ್ಯಪಾಲರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ ಅವರ ಫೆÇೀಟೋ ಸುಡುವುದು, ಅವರಿಗೆ ಅವಮಾನಿಸುವುದು ಸೇರಿದಂತೆ ಆ ಸಂವಿಧಾನಿಕ ಚಟುವಟಿಕೆಯಲ್ಲಿ ತೊಡಗಿರುವ ಕೈ ಪಾಳೆಯಕ್ಕೆ ಬಿಸಿ ಮುಟ್ಟಿಸಲು ಭಾರತೀಯ ಜನತಾ ಪಕ್ಷ ಜಿಲ್ಲಾ ಘಟಕ ಇಂದು ಪ್ರತಿಭಟನೆ ನಡೆಸಿತು.
ನಗರದ ಗಣೇಶ್ ಮೈದಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ರೋಟರಿ ಸರ್ಕಲ್, ಜನರಲ್ ಕರಿಯಪ್ಪ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ಚೌಕ್ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತ್ತು.
ನಂತರ ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿರುವ ಬಿಜೆಪಿ ಪ್ರಮುಖರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು, ಕಾಂಗ್ರೆಸ್ ಪಕ್ಷವು ರಾಜ್ಯಪಾಲರಿಗೆ ಅವಮಾನಿಸಿದ ವಿಚಾರದಲ್ಲಿ ರಾಜ್ಯಪಾಲರಿಗೆ ಬೇಸರಿತ್ ಕ್ಷಮೆ ಕೋರಬೇಕು, ಹಾಗೆ ಸಚಿವರುಗಳಾದ ಜಮೀರ್ ಅಹ್ಮದ್ ಖಾನ್, ಕೃಷ್ಣ ಬೈರೇಗೌಡ, ದಿನೇಶ ಗುಂಡೂರಾವ್ ಹಾಗೂ ಐವನ್ ಡಿಸೋಜಾ ಕೂಡಲೇ ರಾಜೀನಾಮೆ ನೀಡಬೇಕೆಂದು ಕೇಸರು ಪಕ್ಷದ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು.
ಈ ಸಂದರ್ಭದಲ್ಲಿ ಶಾಸಕರಾದ ಪ್ರಭು ಚೌಹಾಣ್, ಶರಣು ಸಲಗರ್, ಡಾ.ಶೈಲೇಂದ್ರ ಬೆಲ್ದಾಳೆ, ಡಾ ಸಿದ್ದು ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಉಪಾಧ್ಯಕ್ಷ ವಿಜಯಕುಮಾರ್ ಪಾಟೀಲ್ ಗಾದಗಿ, ಮಾಜಿ ಬುಡಾ ಅಧ್ಯಕ್ಷ ಬಾಬು ವಾಲಿ, ಕಲಬುರ್ಗಿ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಸೇರಿದಂತೆ ಬಿಜೆಪಿಯ ಅನೇಕ ಗಣ್ಯರು, ಕಾರ್ಯಕರ್ತರು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರತಿಭಟನೆ ನಡೆಸಿದರು.