ಡಾ. ಬಸವಲಿಂಗ ಪಟ್ಟದ್ದೇವರು, ಮಾಲು, ಅಂದಾನಿ, ಬೆಟದೂರ್, ವಿಜಯಲಕ್ಷ್ಮೀ ಸೇರಿ ಐವರಿಗೆ ಕರ್ಮಯೋಗಿ ಪ್ರಶಸ್ತಿ
ಕಲಬುರಗಿ:ಆ.22: ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಆಗಸ್ಟ್ 23ರಂದು ಸಂಜೆ 6 ಗಂಟೆಗೆ ಕರ್ಮಯೋಗಿ ಡಾ. ಎಸ್.ಎಸ್. ಪಾಟೀಲ್ ಅವರ ದ್ವಿತೀಯ ಪುಣ್ಯಸ್ಮರಣೆ ಹಾಗೂ ಕರ್ಮಯೋಗಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಡಾ. ಮ.ನು. ಬಳಿಗಾರ್ ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭದ ದಿವ್ಯ ಸಾನಿಧ್ಯವನ್ನು ಶರಣಬಸವೇಶ್ವರ್ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಡಾ. ದಾಕ್ಷಾಯಣಿ ಎಸ್. ಅಪ್ಪಾ ಅವರು ವಹಿಸುವರು. ಉದ್ಘಾಟನೆಯನ್ನು ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ನೆರವೇರಿಸುವರು ಎಂದರು.
ಮುಖ್ಯ ಅತಿಥಿಗಳಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ. ಅಜಯ್ ಧರ್ಮಸಿಂಗ್, ಗೌರವಾನ್ವಿತ ಅತಿಥಿಗಳಾಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಆಗಮಿಸುವರು. ಎಸ್.ಆರ್. ಪಾಟೀಲ್ ಫೌಂಡೇಶನ್ ಗೌರವಾಧ್ಯಕ್ಷೆ ಶ್ರೀಮತಿ ಸರೋಜನಿದೇವಿ ಎಸ್. ಪಾಟೀಲ್ ಅವರು ಘನ ಉಪಸ್ಥಿತಿ ಇರುವರು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿ.ಆರ್. ಪಾಟೀಲ್ ಆಂಡ್ ಕಂಪೆನಿಯ ಉದ್ಯಮಿ ರೇವಣಸಿದ್ದಪ್ಪಾ ಜಿ. ಪಾಟೀಲ್, ಪಾಟೀಲ್ ಗ್ರೂಪ್ ಆಫ್ ಇಂಡಸ್ಟ್ರೀಸ್‍ನ ಅಧ್ಯಕ್ಷ ಡಾ. ಲಿಂಗರಾಜ್ ಎಸ್. ಪಾಟೀಲ್, ನಿರ್ದೇಶಕ ಸಿದ್ಧಲಿಂಗ್ ಎಸ್. ಪಾಟೀಲ್ ಅವರು ಉಪಸ್ಥಿತರಿರುವರು ಎಂದು ಅವರು ಹೇಳೀದರು.
ಬೀದರ್ ಜಿಲ್ಲೆಯ ಭಾಲ್ಕಿ ಹಿರೇಮಠ್ ಸಂಸ್ಥಾನದ ಡಾ. ಬಸವಲಿಂಗ ಪಟ್ಟದ್ದೇವರು, ಉದ್ಯಮಿ ಎನ್.ಕೆ. ಮಾಲು, ಚಿತ್ರಕಲಾವಿದ ಡಾ. ವಿ.ಜಿ. ಅಂದಾನಿ, ಕೊಪ್ಪಳ್‍ದ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರ್, ಬೆಂಗಳೂರಿನ ಖ್ಯಾತ ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮೀ ದೇಶಮಾನೆ ಅವರಿಗೆ ಕರ್ಮಯೋಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮುಂತಾದವರು ಉಪಸ್ಥಿತರಿದ್ದರು.