ಹಿರಿಯರನ್ನು ಗೌರವಿಸುವ ಸಂಸ್ಕøತಿ ಬೆಳೆಯಲಿ
ಕಲಬುರಗಿ:ಆ.22: ಸಮಾಜಕ್ಕೆ ಹಿರಿಯರು ಭಾರವಲ್ಲ. ಅವರು ತಮ್ಮಲ್ಲಿರುವ ಹಿರಿತನದ ಜ್ಞಾನ, ಅನುಭವವನ್ನು ಸಮಾಜಕ್ಕೆ ನೀಡಬೇಕು. ಕಿರಿಯರು ಅವರ ಅನುಭವದ ಮಾತುಗಳನ್ನು ಆಲಿಸಿ ಮುನ್ನಡೆಯಬೇಕು. ಎಂತಹ ಸಂದರ್ಭದಲ್ಲಿಯೂ ವಯೋವೃದ್ಧರನ್ನು ವೃದ್ಧಾಶ್ರಮಕ್ಕೆ ನೂಕುವ ನೀಚ ಬುದ್ಧಿ ಬೇಡ. ಹಿರಿಯರಿಗೆ ಗೌರವ ನೀಡಿ, ಉತ್ತಮ ಆರೈಕೆ, ಆಶ್ರಯ ನೀಡುವ ಭಾರತೀಯ ಶ್ರೇಷ್ಟ ಸಂಸ್ಕøತಿ ಉಳಿಸಿಕೊಂಡು ಹೋಗಬೇಕಾಗಿದೆ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್.ಬಿರಾದಾರ ಹೇಳಿದರು.
ನಗರದ ನ್ಯೂ ರಾಘವೇಂದ್ರ ಕಾಲನಿಯಲ್ಲಿನ ‘ಶ್ರೀ ವಿವೇಕಾನಂದ ಕೋಚಿಂಗ್ ಸೆಂಟರ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡುತ್ತಾ, ಪಾಶ್ಯಾತ್ಯ ಸಂಸ್ಕøತಿಯ ಪ್ರಭಾವದಿಂದಾಗಿ ಹಿರಿಯರಿಗೆ ಗೌರವ ನೀಡುವ ಪದ್ಧತಿ ಕಡಿಮೆಯಾಗುತ್ತಿರುವದು ವಿಷಾದನೀಯ ಸಂಗತಿ. ವೃದ್ಧಾಶ್ರಮಗಳು ಇದರ ಸಂಕೇತಗಳಾಗಿವೆ. ಸದೃಢ ರಾಷ್ಟ್ರ ನಿರ್ಮಾಣಕ್ಕೆ ಹಿರಿಯರ ಸೂಕ್ತ ಸಲಹೆ, ಮಾರ್ಗದರ್ಶನ ತುಂಬಾ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥ ಬಸವರಾಜ ಮಳ್ಳಿ, ಶಿಕ್ಷಕರಾದ ಸುನಿಲ ಸೊನ್ನ, ಅಕ್ಷತಾ ಸಿಂಧೆ, ವಿದ್ಯಾರ್ಥಿ ಪ್ರತಿನಿಧಿ ಮಹಾಂತೇಶ ಜಮಾದಾರ ಹಾಗೂ ವಿದ್ಯಾರ್ಥಿಗಳಿದ್ದರು.