ಅ.4ರಿಂದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಮುಷ್ಕರ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಅ.02:- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅ.4ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಸೇವೆಗಳನ್ನು ನಿಲ್ಲಿಸಿ ಅನಿರ್ದಿμÁ್ಟವಧಿ ಮುಷ್ಕರವನ್ನು ಆರಂಭಿಸಲಾಗುತ್ತಿದೆ.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾ.ಪಂ. ಕಚೇರಿಗಳನ್ನು ಸೇವೆ ಸಲ್ಲಿಸುತ್ತಿರುವ ನೌಕರರು ಪದಾಧಿಕಾರಿಗಳು ಹಾಗೂ ಗ್ರಾ.ಪಂ. ಸದಸ್ಯರ ಒಕ್ಕೂಟದ ಪದಾಧಿಕಾರಿಗಳು ಜಿ.ಪಂ. ಉಪ ಕಾರ್ಯದರ್ಶಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದರು
ರಾಜ್ಯದ ಶೇಕಡ 68 ರಿಂದ 70 ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯಿತಿಗಳಿಂದ ಶೇಕಡ 70ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತಿ, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳು, ಗ್ರಾಮ ಪಂಚಾಯತಿಯ ಎಲ್ಲಾ ಪಂಚ ನೌಕರರಾದ ಕ್ಲರ್ಕ್ ಕಂ ಡಿಇಓ, ಕರವಸೂಲಿಗಾರರು, ಜಲಗಾರರು, ಕಛೇರಿ ಸಹಾಯಕರರು, ಸ್ವಚ್ಛತಾಗಾರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ಅ. 4 ರಿಂದ ಎಲ್ಲಾ ಸೇವೆಗಳನ್ನು ಬಂದ್ ಮಾಡಿ ಮುಷ್ಕರ ಆರಂಭಿಲಾಗುವುದು ಎಂದು ಗ್ರಾಮ ಅಭಿವೃದ್ದಿ ಅಧಿಕಾರಿಗಳ ಸÀಂಘದ ಜಿಲ್ಲಾಧ್ಯಕ್ಷ ಕುಮಾರಸ್ವಾಮಿ ತಿಳಿಸಿದರು.
ಗ್ರಾ.ಪಂ.ಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಕೇವಲ ಎಲ್ಲಾ ಸಮಸ್ಯೆಗಳಿಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು, ನೌಕರರನ್ನು ಹಾಗೂ ಸಿಬ್ಬಂದಿಗಳನ್ನು ನೇರ ಹೊಣೆಗಾರ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಪಟ್ಟಿಯನ್ನು ಈ ಪತ್ರಕ್ಕೆ ಲಗತ್ತಿಸಿರುವಂತೆ ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 4 ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿಯ ಸೇವೆಗಳಾದ ನರೇಗಾ, 15ನೇ ಹಣಕಾಸು ಯೋಜನೆ ಕಾರ್ಯಕ್ರಮಗಲೂ, ವಸತಿ ಯೋಜನೆಯ ಆಶ್ರಯ ಮನೆಗಳ ನಿರ್ಮಾಣ, ಇ. ಜಾಮಾ, ಸ್ವಚ್ಚ ಭಾರತ್ ಮಿಷನ್, ಬಾಫೂಜಿ ಸೇವೆ ಕೇಂದ್ರದ ಸೇವೆಗಳು, ಗ್ರಾಮಗಳಲ್ಲಿ ಕಸ ಸಂಗ್ರಹಣೆ, ಕುಡಿಯುವ ನೀರು ಸರಬರಾಜು, ವಿದ್ಯುತ್ ದೀಪಗಳ ನಿರ್ವಹಣೆ, ಕಛೇರಿ ಕರ್ತವ್ಯ ನಿರ್ವಹಿಸುವುದನ್ನು ನಿಲ್ಲಿಸಿ ಅನಿರ್ದಿμÁ್ಟವಧಿ ಹೋರಾಟ ಕೈಗೊಳ್ಳುತ್ತಿರುವುದಾಗಿ ಜಿಲ್ಲಾ ಪಂಚಾಯತ್ ಸಿಇಓಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವದಲ್ಲಿ ಜಿ.ಪಂ. ಸಿಇಓ ಅವರ ಬದಲಾಗಿ ಜಿ.ಪಂ. ಉಪಕಾರ್ಯಧರ್ಶಿ ಲಕ್ಷ್ಮಿ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ದಿ ಅಧಿಕಾರಿಗಳ ಸಂಘದ ಅಧ್ಯಕ್ಷ ಕುಮಾರಸ್ವಾಮಿ, ಗ್ರಾ.ಪಂ. ಸದಸ್ಯರ ಒಕ್ಕೂಟದ ಜಿಲ್ಲಾಧ್ಯಕ್ಷ ಕೆಂಪರಾಜು, ರಾಜ್ಯ ಉಪಾಧ್ಯಕ್ಷ ವೃಷಭೇಂದ್ರಪ್ಪ, ಡಾಟಾ ಎಂಟ್ರಿ ಅಪರೇಟರ್ ಸಂಘದ ಅಧ್ಯಕ್ಷ ಮಹೇಶ್, ದ್ವಿ ದರ್ಜೆ ಸಹಾಯಕರ ಸಂಘ ಅಧ್ಯಕ್ಷ ಹಾಗು ಕಾರ್ಯದರ್ಶಿ ಮಹದೇವಸ್ವಾಮಿ, ಸೇರಿದಂತೆ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.