ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ; ವಿಜೇತರಿಗೆ ಅಭಿನಂದನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ ಆ.22-ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾ ಕೂಟದಲ್ಲಿ ಚಾಮರಾಜನಗರ ಜಿಲ್ಲೆಯಿಂದ ಭಾಗವಹಿಸಿದ್ದ ಜಿಲ್ಲಾ ಸಂಘದ ಖಜಾಂಚಿ ಮಹಾದೇವಯ್ಯ.ಎಸ್ ಹಾಗೂ ಸುನಿಲ್ ಅವರುಗಳು ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಮತ್ತು ಡಬಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿತಂದಿರುತ್ತಾರೆ.
ವಿಜೇತರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೆಶಕಿ ಶಶಿಕಲಾ ಪ್ರಶಸ್ತಿ ಪತ್ರ ವಿತರಿಸಿದರು.
ಕರ್ನಾಟಕರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ಹಾಗೂ ಪದಾಧಿಕಾರಿಗಳು ವಿಜೇತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.