ಅಗಸ್ಟ್ 24ರ ಶನಿವಾರದಂದು ಪರಿಶಿಷ್ಟ ಜಾತಿ ಶಿಕ್ಷಕರ ಕ್ಷೇಮಾಭಿವೃದ್ದಿ ಸಂಘದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಸಂಜೆವಾಣಿ ವಾರ್ತೆ
ಚಾಮರಾಜನಗರ ಆಗಸ್ಟ್-22– ಚಾಮರಾಜನಗರ ಜಿಲ್ಲಾ ಘಟಕದ ಪರಿಶಿಷ್ಟ ಜಾತಿ ಶಿಕ್ಷಕರ ಕ್ಷೇಮಾಭಿವೃದ್ದಿ ಸಂಘದಿಂದ 2023- 2024ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮತ್ತು ಜಿಲ್ಲಾ ಮಟ್ಟದ ಪರಿಶಿಷ್ಟಜಾತಿ ಸೀಕ್ಷಕರ ನೌಕರರ ಜಾಗೃತಿ ಸಮಾವೇಶ, ಶೈಕ್ಷಣಿಕ ಕಾರ್ಯಗಾರವನ್ನು ಅಗಸ್ಟ್ 24ರ ಶನಿವಾರದಂದು ಕರಿನಂಜನಪುರದ ರಸ್ತೆಯಲ್ಲಿ ಇರುವ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಸಲಾಗುವುದು ಎಂದು ಪರಿಶಿಷ್ಟಜಾತಿ ಶಿಕ್ಷಕರ ಕ್ಷೇಮಾಭಿವೃದ್ದಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಕೆ.ರಾಮಸ್ವಾಮಿ ತಿಳಿಸಿದರು.
ನಗರದ ಭುವನೇಶ್ವರಿ ವೃತ್ತದ ಶಿಕ್ಷಕರ ಭವನದ ಆವರಣದಲ್ಲಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದರು. ಚಾಮರಾಜನಗರ ಜಿಲ್ಲೆಯಲ್ಲಿ ಶಂಘವು ಉತ್ತಮವಾಗಿ ಸಾಗುತ್ತಿದೆ. ಪ್ರತಿಯೊಬ್ಬ ಸದಸ್ಯರು ಸಂಘಕ್ಕೆ ತನ್ನದೇಯಾದ ಸೇವೆಯನ್ನು ನೀಡುತ್ತಿದ್ದಾರೆ. ಪ್ರತಿವರ್ಷದಂತೆ ಈ ಭಾರಿಯು ವಿದ್ಯಾರ್ಥಿಗಳಿಗೆ ಹಾಗೂ ಉತ್ತಮ ಸೀಕ್ಷಕರನ್ನು ಗೌರವಿಸುವ ಕಾರ್ಯವನ್ನು ಮಾಡುತ್ತಿದ್ದೇವೆ ಸಂಘದ ಸದಸ್ಯರ ಪ್ರೊತ್ಸಾಹವು ಇದೆ ಎಂದು ಹೇಳಿದರು.
ಈ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹದೇವಪ್ಪ, ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ನಂಜುಂಡಸ್ವಾಮಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರದಾನ ಕಾರ್ಯದರ್ಶಿ ಮಹದೇವಸ್ವಾಮಿ, ಜಿಲ್ಲಾ ಖಜಾಂಚಿ ಪುಟ್ಟಸ್ವಾಮಿ, ಜಿಲ್ಲಾ ಉಪಾಧ್ಯಕ್ಷರಾದ ಮುರುಗೇಶ್‍ಕುಮಾರ್, ತ್ಯಾಗರಾಜು, ಗಜೇಂದ್ರ, ಸಾವಿತ್ರಿ ಭಾಪುಲೆ ಶಿಕ್ಷಕಿಯರ ಸಂಘದ ನೇತ್ರಾವತಿ. ಸುಶೀಲ.ಸಿ.ಎಂ, ನಂದೀನಿ, ತಾಲ್ಲೂಕು ಸಂಘದ ಅಧ್ಯಕ್ಷ ಎಂ.ಡಿ.ಮಹದೇವಯ್ಯ, ಕೃಷ್ಣಮೂರ್ತಿ, ಉಪನ್ಯಾಸಕರ ಸಂಘದ ಮೂರ್ತಿ, ಎನ್.ಎಸ್.ಮಹದೇವಸ್ವಾಮಿ, ದೈಹಿಕ ಶಿಕ್ಷರ ಸಂಘದ ಚಿಕ್ಕಬಸವಯ್ಯ, ಪತ್ತಿನ ಸಹಕಾರ ಸಂಘದ ನಂಜುಂಡಯ್ಯ ಹಾಗೂ ಇತರ ಸಂಘದ ಪದಾಧಿಕಾರಿಗಳು ಹಾಜರಿದ್ದರು.