ಸಿದ್ದರಾಮಯ್ಯಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆಯಿಲ್ಲ
ಕೋಲಾರ:ಆ,೨೨:ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆಯಿಲ್ಲ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ಒತ್ತಾಯಿಸಿದರು.
ತಾಲೂಕಿನ ಕೆಂದಟ್ಟಿ ಗ್ರಾಮದಲ್ಲಿ ಬುಧವಾರ ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲೂಕು ಕಾರ್ಯಕಾರಣಿ ಸಭೆಯಲ್ಲಿ ಗೋಪೂಜೆ ಸಲ್ಲಿಸಿ ಮಾತನಾಡಿದ ಅವರು ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ನೋಟೀಸ್ ನೀಡಿದ್ದಾರೆ ಆದರೂ ಸಿದ್ದರಾಮಯ್ಯ ನಲವತ್ತು ವರ್ಷಗಳಿಂದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ಕಾಂಗ್ರೆಸ್ ಶಾಸಕರು ಅವರ ಬೆಂಬಲಿಗರು ಸ್ವಯಂ ಸರ್ಟಿಫಿಕೇಟ್ ಕೊಡಲು ಹೊರಟಿದ್ದಾರೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ ವಿಚಾರವನ್ನು ರಾಜಕೀಯ ದಾಳವಾಗಿ ಬಳಸಿಕೊಂಡು ಅಧಿಕಾರದಲ್ಲಿ ಮುಂದುವರಿಯಲು ಪ್ರಯತ್ನಿಸುತ್ತಿರುವುದು ಸರಿಯಲ್ಲ ಪ್ರಕರಣಗಳ ಆರೋಪವಿದ್ದರೂ ಅಧಿಕಾರದಲ್ಲಿ ಮುಂದುವರಿಯಲು ಯತ್ನಿಸುವುದು ಸಂವಿಧಾನಕ್ಕೆ ಮಾಡುವ ಅಗೌರವಾಗಿದೆ ಕೂಡಲೇ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ವೇದಿಕೆಯಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರಾದ ಲಕ್ಷ್ಮಣಗೌಡ, ನಾರಾಯಣಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿಜೆಪಿ ಶಿವಣ್ಣ, ಹುಣಸೀಕೋಟೆ ಶ್ರೀನಿವಾಸ್, ಜಿಲ್ಲಾ ಉಪಾಧ್ಯಕ್ಷರಾದ ಡಾ.ಆರ್ ನಾರಾಯಣಸ್ವಾಮಿ, ಸತೀಶ್ ಗೌಡ, ಗೋಪಸಂದ್ರ ನಾರಾಯಣಸ್ವಾಮಿ, ಜಿಲ್ಲಾ ಖಜಾಂಚಿ ವೆಂಕಟೇಶ್, ಮುಖಂಡರಾದ ಓಹಿಲೇಶ್, ಮುನಿಸ್ವಾಮಿ ಮುಂತಾದವರು ಇದ್ದರು.