ಛಾಯಾಗ್ರಾಹಕರ ಸಮುದಾಯ ಭವನ ನಿರ್ಮಾಣಕ್ಕೆ ಪ್ರಯತ್ನ
ಕೋಲಾರ,ಆ.೨೨- ಛಾಯಾಗ್ರಾಹಕರ ಬಹುದಿನದ ಬೇಡಿಕೆಯಾಗಿರುವ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಸಿಗಹುದಾದ ನಿರ್ಮಾಣಕ್ಕೆ , ಅನುದಾನವನ್ನು ದೊರಕಿಸಲು ಪ್ರಾಮಾಣಿಕ, ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಅಭಿಪ್ರಾಯಪಟ್ಟರು.
ಕೋಲಾರ ಜಿಲ್ಲಾ ಛಾಯಾಗ್ರಾಹಕರ ಸಂಘ, ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೋಲಾರ ಜಿಲ್ಲಾ ಛಾಯಾಗ್ರಾಹಕರ ಮತ್ತು ವಿಡೀಯೋಗ್ರಾಹಕರ ಸಂಘದ ಸಂಯುಕ್ತಶ್ರಯದಲ್ಲಿ ವಿಶ್ವ ಛಾಯಾಗ್ರಾಹಣ ದಿನಾಚರಣೆ ಅಂಗವಾಗಿ ಮಂಗಳವಾರ ಪತ್ರಕರ್ತರ ಭವನದಲ್ಲಿ ನಡೆದ ಛಾಯಾಚಿತ್ರ ಪ್ರದರ್ಶನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ಚಿತ್ರ ತೆಗೆದವರೆಲ್ಲಾ ಛಾಯಾಗ್ರಾಹಕರು ಆಗಲು ಸಾಧ್ಯವಿಲ್ಲ. ಛಾಯಾಗ್ರಾಹಕರು ಹೊರಗಣ್ಣಿಗಿಂತ ಒಳಗಣ್ಣಿನಿಂದ ನೋಡಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಅತ್ಯುತ್ತಮ ಛಾಯಾಗ್ರಾಹಕರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಜಿಲ್ಲಾಧ್ಯಕ್ಷ ವಿ.ಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಕೆ.ಎಸ್.ಗಣೇಶ್, ವಿ.ಮುನಿರಾಜು, ರಾಜ್ಯ ಸಂಘದ ಅಧ್ಯಕ್ಷ ಎಚ್.ಎಲ್.ನಾಗೇಶ್, ಖಜಾಂಚಿ ಲವರಾಜ್, ರವಿಶಂಕರ್, ಉಮಾಶಂಕರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲಾ ಛಾಯಾಗ್ರಾಹಕರ ಸಂಘದ ಉಪಾಧ್ಯಕ್ಷರಾದ ವೇಣುಗೋಪಾಲ್, ಕುಮರೇಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಮುತ್ತುರಾಜ್, ಕೋಲಾರ ತಾಲ್ಲೂಕು ಛಾಯಾಗ್ರಾಹಕರ ಸಂಘದ ಗೌರವಾಧ್ಯಕ್ಷ ಶ್ರೀನಿವಾಸಮೂರ್ತಿ, ತಾಲೂಕು ಅಧ್ಯಕ್ಷ ಸ್ಪಂದನ ರಂಗನಾಥ್, ಉಪಾಧ್ಯಕ್ಷ ಉಮೇಶ್, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ನರಸಾಪುರ, ಖಜಾಂಚಿ ಸತೀಶ್ ಕುಮಾರ್, ಸಹ ಕಾರ್ಯದರ್ಶಿಗಳಾದ ಆನಂದ್ ಕುಮಾರ್, ಮಂಜುನಾಥ್, ಕಾರ್ಯಕಾರಿ ಸಮಿತಿ ಸದಸ್ಯರಾದ ರಮೇಶ್, ನವೀನ್ ಕುಮಾರ್, ಖಲೀಲ್ ಉಲ್ಲಾ, ಅರುಣ್ ಕುಮಾರ್, ಮಂಜುನಾಥ್, ಆನಂದ್, ರಾಜೇಂದ್ರ ಪ್ರಸಾದ್, ರಾಘವೇಂದ್ರ, ಸರ್ವಜ್ಷಮೂರ್ತಿ ಇದ್ದರು.