ಬಾಂಬ್ ಬೆದರಿಕೆ ಕರೆ: ಕೇರಳದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಸ್ಥಿತಿ ಹೇರಿಕೆ
ತಿರುವನಂತಪುರ: ಮುಂಬೈನಿಂದ ಬಂದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ಗುರುವಾರ ಬೆಳಗ್ಗೆ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ವಿಮಾನವು ಬೆಳಗ್ಗೆ ೮ ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದ ವೇಳೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಅದನ್ನು ಪ್ರತ್ಯೇಕ ಕಡೆಗೆ ಸ್ಥಳಾಂತರಿಸಲಾಯಿತು. ಪ್ರಯಾಣಿಕರನ್ನು ವಿಮಾನದಿಂದ ಸ್ಥಳಾಂತರಿಸಲಾಗುತ್ತಿದೆ.
ವಿಮಾನವು ತಿರುವನಂತಪುರಂ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ಪೈಲಟ್‌ನಿಂದ ಬಾಂಬ್ ಬೆದರಿಕೆಯನ್ನು ತಿಳಿಸಲಾಯಿತು. ವಿಮಾನದಲ್ಲಿ ೧೩೫ ಪ್ರಯಾಣಿಕರಿದ್ದರು, ಬೆದರಿಕೆಯ ಮೂಲದ ವಿವರಗಳನ್ನು ಮತ್ತು ಇತರ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.